16ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯುತ್ಸವ

New Project (32)
Published on

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಪಾಣೆಮಂಗಳೂರು ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್‌ನ ಶ್ರೀ ವೀರಮಾರುತಿ ಮಂದಿರದ 16ನೇ ವರ್ಷದ ಪ್ರತಿಷ್ಠಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ನರಿಕೊಂಬು ಶ್ರೀ ರಾಜಗೋಪಾಲಾಚಾರ್ ಪೌರೋಹಿತ್ಯದಲ್ಲಿ ಜರುಗಿತು.

ಶ್ರೀಮಾರುತಿ ದೇವರಿಗೆ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ ಜರುಗಿತು. ಮಾರುತಿನಗರ ನರಿಕೊಂಬು ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಅಧ್ಯಕ್ಷ ಹರೀಶ ಎನ್., ಪದಾಧಿಕಾರಿಗಳು, ಸದಸ್ಯರು, ಶ್ರೀ ವೀರಮಾರುತಿ ಮಹಿಳಾ ಮಂಡಳಿ ಸದಸ್ಯರು, ಊರಿನ ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net