ಪ್ರವೀಣ್ ನೆಟ್ಟಾರು ಹತ್ಯೆ ಐವರು ಆರೋಪಿಗಳು ಎನ್ ಐಎ ಕಸ್ಟಡಿಗೆ

IMG_20220819_125243
Published on

ಮಂಗಳೂರು: ಬೆಳ್ಳಾರೆಯ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಮ್ಮ ವಶಕ್ಕೆ ತೆಗೆದುಕೊಂಡಿದೆ.

ಆರೋಪಿಗಳಾದ ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ್, ರಿಯಾಝ್ ಅಂಕತ್ತಡ್ಕ, ನೌಫಲ್, ಸೈನುಲ್ ಅಬೀದ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ 6 ದಿನಗಳ ಕಾಲ ಎನ್‌ಐಎ ವಶಕ್ಕೆ ಪಡೆದಿದೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದ.ಕ. ಜಿಲ್ಲಾ ಪೊಲೀಸರು ಒಟ್ಟು 10 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಈ ಹತ್ಯೆ ಪ್ರಕರಣವನ್ನು ತನಿಖೆ ಕೈಗೆತ್ತಿಕೊಂಡ ಎನ್‌ಐಎ ಆರೋಪಿಗಳನ್ನು ಸ್ಥಳೀಯ ಪೊಲೀಸರಿಂದ ವಶಕ್ಕೆ ಪಡೆದು ನಿನ್ನೆ ಬೆಂಗಳೂರಿನ ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net