

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಇದೀಗ ರಾಷ್ಟ್ರೀಯ ತನಿಖಾ ಆಯೋಗ(ಎನ್ಐಎ)ಕ್ಕೆ ಹಸ್ತಾಂತರಗೊಂಡಿದೆ.
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸುಳ್ಯ ಕಿರಿಯ ಸಿವಿಲ್ ನ್ಯಾಯಾಲಯದ ಮೂಲಕ ಕರ್ನಾಟಕ ಪೊಲೀಸರು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಈಗಾಗಲೇ ನಾಲ್ವರ ಮೇಲೆ ಪ್ರಕರಣ ದಾಖಲಿಸಿಕೊಂಡಿದೆ.
ಸವಣೂರು ನಿವಾಸಿ ಝಾಕೀರ್, ಬೆಳ್ಳಾರೆ ನಿವಾಸಿ ಮಹಮ್ಮದ್ ಶಾಫೀಕ್, ಶೇಖ್ ಸದ್ದಾಂ ಹುಸೇನ್, ಅಬ್ದುಲ್ ಹ್ಯಾರಿಸ್ ಮೇಲೆ ಆಗಸ್ಟ್ 4ರಂದೇ ಎನ್ಐಎ ಪ್ರಕರಣ ದಾಖಲಿಸಿಕೊಂಡಿದ್ದು, ಹತ್ಯೆಯ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಲಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಪ್ರವೀಣ್ ನೆಟ್ಟಾರ್ ಕೊಲೆಯಾಗಿತ್ತು.