

ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಮೂವರು ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಗುರುವಾರ ಬೆಳಗ್ಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಆಯುಧಗಳನ್ನು ವಶಕ್ಕೆ ಪಡೆಯಲಾಗುವುದು ಎಂದರು.
ಪ್ರಕರಣಗಳಲ್ಲಿ ಸಂಚು ರೂಪಿಸಿದ ಹಾಗೂ ಸಹಕಾರ ನೀಡಿದ ಒಟ್ಟು ಏಳು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಗಳ ಬಂಧನ ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿದೆ. ಇನ್ನೂ ತನಿಖೆ ಮುಂದುವರಿದಿದ್ದು ಸಹಕಾರ, ಸಂಚು ರೂಪಿಸಲು ಭಾಗಿಯಾದವರ ಬಂಧನವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.