ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ

28mdkj2 - Copy
Published on

ಮಡಿಕೇರಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಗೆ ಖಂಡಿಸಿ ಗುರುವಾರ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಸಂಘ- ಪರಿವಾರದ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ವಿಶ್ವ ಹಿಂದು ಪರಿಷತ್, ಭಜರಂಗದಳ, ದುರ್ಗಾವಾಹಿನಿ, ಮಾತೃ ಮಂಡಳಿ ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದು ಪರ ಹೋರಾಟಗಾರರು ಪಾಲ್ಗೊಂಡಿದ್ದರು. ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು. ಹಿಂದು ಕಾರ್ಯ ಕರ್ತರಿಗೆ ರಕ್ಷಣೆ ನೀಡುತ್ತಿಲ್ಲ, ಕೊಲೆಗಡುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ನಗರಸಭೆ ಉಪಾಧ್ಯಕ್ಷೆ ಸವಿತಾ ರಾಕೇಶ್, ವಿಶ್ವ ಹಿಂದು ಪರಿಷತ್ ಪ್ರಧಾನ ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net