ಮಳೆಗಾಗಿ ಪ್ರಾರ್ಥಿಸಿ ಕತ್ತೆಗಳಿಗೆ ಮದುವೆ: ನಾಗಮಂಗಲ ಪಟ್ಟಣದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಜನರು

Pray for rain and marry donkeys mandya
Published on

ನಾಗಮಂಗಲ: ಜಿಲ್ಲೆಯ ವಿವಿಧೆಡೆ ಮಳೆಯಾಗುತ್ತಿದ್ದರೂ ಪಟ್ಟಣದತ್ತ ಮುಖ ಮಾಡದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದಲ್ಲಿ ಜನರು ಕತ್ತೆಗಳಿಗೆ ಮದುವೆ ಮಾಡುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮೇಗಲಕೇರಿ ಬಡಗೂಡಮ್ಮ ದೇವಾಲಯ ಆವರಣದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭ ಲಗ್ನದಲ್ಲಿ ಕತ್ತೆಗಳಿಗೆ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿದರು. ದೇವಾಲಯದಲ್ಲಿ ಬ್ರಾಹ್ಮಣ ಸಮುದಾಯದವರು ವಿಶೇಷ ಪೂಜೆಯನ್ನು ಸಲ್ಲಿಸಿ ಶುಭ ಲಗ್ನದಲ್ಲಿ ಕತ್ತೆಗಳಿಗೆ ಮದುವೆ ಮಾಡಿಸಿದರು ಮಳೆರಾಯನನ್ನು ಪ್ರತಿಷ್ಠಾಪನೆ ಮಾಡಿ ಹಿರಿಯ ನಾಗರಿಕ ರಾಮಕೃಷ್ಣ ಅವರ ಮೇಲೆ ಮಳೆರಾಯ ಮೂರ್ತಿ ಕೂರಿಸಲಾಯಿತು. ಬಳಿಕ ಪ್ರಮುಖ ಬೀದಿಯ ಪ್ರತಿ ಮನೆಗೆ ಹೋಗಿ ಪೂಜೆ ಮಾಡಿಸಲಾಯಿತು.

ಸೌಮ್ಯಕೇಶವಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ತೀರು ನಾರಾಯಣ್ ಮಾತನಾಡಿ, ಬೇರೆಡೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ನಮ್ಮ ಪುರಸಭೆ ವ್ಯಾಪ್ತಿಯಲ್ಲಿ ಮಳೆಯಾಗಿಲ್ಲ. ಆದ್ದರಿಂದ ದೇವರಲ್ಲಿ ಪ್ರಾರ್ಥಿಸಿಕೊಂಡು ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಗ್ರಾಮದ ಮುಖಂಡ ರಂಗಸ್ವಾಮಿ ಮಾತನಾಡಿ ನಾಡಿನ ಎಲ್ಲೆಡೆ ಮಳೆ ಸುರಿದಿದೆ ನಾಗಮಂಗಲದಲ್ಲಿ ಮಳೆಯ ಕೊರತೆ ಇದ್ದು ರೈತರು ಕಂಗಲಾಗಿದ್ದಾರೆ ಆದ್ದರಿಂದ ವಿಶೇಷ ಪೂಜೆಯನ್ನು ಸಲ್ಲಿಸಿ ಮಳೆರಾಯನನ್ನು ಪ್ರಾರ್ಥಿಸಿಕೊಂಡಿದ್ದೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net