ಶುಭ ಶುಕ್ರವಾರದ ಪ್ರಯುಕ್ತ ಪ್ರಾರ್ಥನಾ ಕೂಟ

29sunti01
ಧರ್ಮಗುರುಗಳಾದ ರೆ..ಫಾ.ಅರುಳ್ ಸೆಲ್ವಕುಮಾರ್, ಸಹಾಯಕ ಗುರುಗಳಾದ ಫಾ.ನವೀನ್‌ಕುಮಾರ್ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು.
Published on

ಸುಂಟಿಕೊಪ್ಪ: ಇಲ್ಲಿನ ಸಂತ ಅಂತೋಣಿ ದೇವಾಲಯದಲ್ಲಿ ಗುಡ್ ಫ್ರೈಡೆ ಅಂಗವಾಗಿ ಗುರುವಾರ ಸಂಜೆ ಕಡೆಯ ಭೋಜನ ಮತ್ತು ವಿಶೇಷ ಬಲಿಪೂಜೆಯನ್ನು ನಡೆಸಲಾಯಿತು. ಪ್ರಾರ್ಥನಾ ಕೂಟವನ್ನು ದೇವಾಲಯದ ಧರ್ಮಗುರುಗಳಾದ ಫಾ.ಅರುಳ್ ಸೆಲ್ವಕುಮಾರ್ ಹಾಗೂ ಸಹಾಯಕ ಗುರುಗಳಾದ ನವೀನ್‌ಕುಮಾರ್ ಅವರು ನೇರವೇರಿಸಿದರು. ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಕ್ರೈಸ್ತರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥನಾ ಕೂಟದಲ್ಲಿ ಪಾಲ್ಗೊಂಡಿದ್ದರು.

ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪ್ರಾರ್ಥನೆ ಹಾಗೂ ಸುತ್ತು ಆರಾಧನೆಗಳನ್ನು ಧರ್ಮಗುರುಗಳಾದ ಫಾ.ಅರುಳ್ ಸೆಲ್ವಕುಮಾರ್ ಮತ್ತು ನವೀನ್‌ಕುಮಾರ್ ನೆರವೇರಿಸಿದರು. ಮಧ್ಯಾಹ್ನ ದೇವಾಲಯದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಸಂತಮೇರಿ, ಕ್ರಿಸ್ತ ಶಿಲುಬೆ ಯಾತನೆಯನ್ನು ಸ್ಮರಿಸುತ್ತಾ ಪ್ರಾರ್ಥನೆ ಹಾಗೂ ಆರಾಧನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ತೊಂಡಗಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net