

ಚಿಕ್ಕಮಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯ ವೃದ್ಧಿ ಹಾಗೂ ದೀರ್ಘಾಯುಷ್ಯಕ್ಕೆ ಪ್ರಾರ್ಥಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಬಸವನಹಳ್ಳಿ ಸಮೀಪದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಗುರುವಾರ ರಾತ್ರಿ ವಿಶೇಷ ಪೂಜೆ ಸಲ್ಲಿಸಿ ಪ್ರಾಥನೆ ನಡೆಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೆಸಂತಾ ಅನಿಲ್‌ಕುಮಾರ್, ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿಯವರ ಸಾವನ್ನು ಬಯಸುವ ಹೇಳಿಕೆ ನೀಡಿರುವುದು ಖಂಡನೀಯ ಎಂದು ದೂರಿದರು.
ದೇಶದ ಶ್ರೇಯೋಭಿವೃದ್ಧಿಗಾಗಿ ಹಗಲಿರುಳೆನ್ನದೇ ದುಡಿಯುತ್ತಿರುವ ಪ್ರಧಾನಿಯ ಸಾವನ್ನು ಬಯಸು ವ ಅರ್ಹತೆ ಕಾಂಗ್ರೆಸ್ಸಿಗಿಲ್ಲ. ಇಂಥ ಹಗುರವಾದ ಹೇಳಿಕೆ ನೀಡಿರುವುದನ್ನು ಕಾಂಗ್ರೆಸ್ ನಾಯಕರು ನಿಲ್ಲಿಸಬೇಕು. ದೇಶದ ಭದ್ರತೆ ವಿಚಾರದಲ್ಲಿ ಪ್ರಾಮುಖ್ಯತೆ ನೀಡಿರುವುದು ನರೇಂದ್ರ ಮೋದಿ ಸರ್ಕಾರ ಎನ್ನು ವುದು ಮರೆಯಬಾರದು ಎಂದರು.
ಜಮ್ಮು-ಕಾಶ್ಮೀರದಲ್ಲಿ ೩೭೦ ರದ್ದುಗೊಳಿಸಿ ಭಾರತದ ಅವಿಭಾಜ್ಯ ಅಂಗವೆAದು ಪರಿಗಣಿಸಿರುವುದು, ಮಹಿಳೆಯರ ಪ್ರಗತಿಗಾಗಿ ಶೇ.೩೩ ಮೀಸಲಾತಿ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ತಿಂಗಳು ೬ ಸಾವಿರ ರೂ. ಖಾತೆಗೆ ಜಮಾ ಮಾಡಿರುವುದು ಸೇರಿದಂತೆ ಸರ್ವತೋಮುಖ ಅಭಿವೃಧ್ದಿಗೆ ಶ್ರಮಿಸಿರುವ ಪ್ರಧಾನಿಯ ಸಾವನ್ನು ಬಯಸುವ ಯೋಗ್ಯತೆ ಕಾಂಗ್ರೆಸ್ಸಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಯುವತಿಯರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲದೇ ಶ್ರೀಬಾಲರಾಮನ ಪ್ರತಿಷ್ಟಾಪನೆ ಸಮಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳಿಗೆ ಆಹ್ವಾನಿಸಿದ ಮೇರೆಗೂ ತಿರಸ್ಕರಿಸಿ ಉದ್ದಟತನ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿರುವುದು ಗಮನಿಸಿದರೆ ಕಾಂಗ್ರೆಸ್ ಹಿಂದೂಗಳ ವಿರೋಧಿಗಳೆಂದು ಎದ್ದು ಕಾಣುತ್ತಿದೆ ಎಂದು ಟೀಕಿಸಿದರು.
ದೇಶದ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರುಗಳು ಇಲ್ಲಸಲ್ಲದ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಎಲ್ಲೇ ತೆರಳಿದರೂ ಮೋದಿಯೆಂದು ಎದ್ದೆತಟ್ಟಿ ಹೇಳುತ್ತೇವೆ. ಆದರೆ ಕಾಂಗ್ರೆಸ್‌ನಲ್ಲಿ ಓರ್ವರಿಗಾದರೂ ನಾಯಕತ್ವದ ಗುಣ ಬೆಳೆದಿದೆಯೇ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ವೀಣಾಶೆಟ್ಟಿ, ಕಾರ್ಯದರ್ಶಿ ಪ್ರೀತಿ ಯೋಗೇಶ್, ನಗರ ಮಹಿಳಾ ಮೋ ರ್ಚಾ ಅಧ್ಯಕ್ಷೆ ಪವಿತ್ರ ಮಧುಗುಂಡಿ, ಉಪಾಧ್ಯಕ್ಷೆ ಸುಜಾತ, ಪ್ರಧಾನ ಕಾರ್ಯದರ್ಶಿ ಮಧು, ಬಿಜೆಪಿ ಪ್ರಧಾನ ಕಾರ್ಯದರ್ಶಿ ನರೇಂದ್ರ, ಮಾಧ್ಯಮ ಪ್ರಮುಖ ಪುಟ್ಟಸ್ವಾಮಿ, ಮುಖಂಡರಾದ ಕೋಟೆ ರಂಗನಾಥ್, ಸಂತೋಷ್ ಕೋಟ್ಯಾನ್ ಮತ್ತಿತರರಿದ್ದರು.