10ರಂದು ಬಜೆಟ್ ಪೂರ್ವಭಾವಿ ಸಭೆ

Published on

ಪಾಂಡವಪುರ: ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಹಾಗೂ ಪಟ್ಟಣದ ಸಮಗ್ರ ಅಭಿವೃದ್ಧಿ ಸಲುವಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಜ.10 ರಂದು ಬಜೆಟ್ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವೀಣಾ ತಿಳಿಸಿದ್ದಾರೆ.

ಸಂಪನ್ಮೂಲ ಕ್ರೋಡೀಕರಣ ಮಾಡಿ ಹಂಚಿಕೆ ಮಾಡುವುದರ ಜತೆಗೆ 2024-25ನೇ ಸಾಲಿನ ಆಯವ್ಯಯ ಆಂದಾಜನ್ನು ತಯಾರಿಸಬೇಕಾಗಿದ್ದು, ಈ ಬಗ್ಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ಸ್ವೀಕರಿಸಲು ಅಂದು ಬೆಳಗ್ಗೆ ಪುರಸಭೆ ಕಚೇರಿ ಸಭಾಂಗಣದಲ್ಲಿ ಪುರಸಭೆ ಸದಸ್ಯರು, ಮಾಜಿ ಸದಸ್ಯರು, ಸಾರ್ವಜನಿಕರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ಬಜೆಟ್ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಎಲ್ಲರೂ ತಪ್ಪದೆ ಸಭೆಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net