ಚುನಾವಣಾ ಪೂರ್ವಭಾವಿ ಸಭೆ

Pre-election meeting
Published on

ಮಡಿಕೇರಿ:

ಮಡಿಕೇರಿ ನಗರ ಕಾಂಗ್ರೆಸ್ ಬೂತ್ ಅಧ್ಯಕ್ಷರ ಚುನಾವಣಾ ಪೂರ್ವಭಾವಿ ಸಭೆ ಶುಕ್ರವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್‌ಯಲ್ಲಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ತಿಂಗಳು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರ ಗೆಲುವಿಗೆ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸುವಂತೆ ನಿರ್ಣಯ ತೆಗೆದುಕೊಳ್ಳಲಾಯಿತು. ಚುನಾವಣೆಯ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಯಿತು.

ನಗರ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್. ಪಿ., ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಯಾಕೂಬ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ತೆನ್ನಿರಾ ಮೈನಾ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಕೆ. ಆರ್., ಮಾಜಿ ಸೈನಿಕರ ಘಟಕದ ಅಧ್ಯಕ್ಷ ಗಣೇಶ್, ಪ್ರಮುಖರಾದ ಜುಲೈಕಾಬಿ, ಮುದ್ದುರಾಜು, ಜಗದೀಶ್, ಬ್ಲಾಕ್ ಕಾರ್ಯದರ್ಶಿ ರಾವುಫ್ ಮತ್ತು ಬೂತ್ ಅಧ್ಯಕ್ಷರುಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net