

ರಾಯಚೂರು ಜಿಲ್ಲೆಯಲ್ಲಿ ಮಾ.೦೧ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಮೇಳದ ಯಶಸ್ವಿಗೆ ಸಂಬAಧಸಿದ ಅಽಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜತೆಗೆ ನಿರುದ್ಯೋಗಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಲಾಭವನ್ನು ಪಡೆಯಬೇಕು ಎಂದು ಜಿಪಂ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಜಲನಿರ್ಮಲ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಉದ್ಯೋಗ ಮೇಳದ ಎರಡನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರಿಗೆ ಅನುಕೂಲವಾಗಲೆಂದು ಮತ್ತು ಅವರಿಗೆ ಉದ್ಯೋಗವನ್ನು ಒದಗಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸೇರಿ ವಿವಿಧ ಇಲಾಖೆಯಿಂದ ಮಾ.೦೧ ರಂದು ಉದ್ಯೋಗ ಮೇಳವನ್ನು ನಗರದ ಕೃಷಿ ವಿಶ್ವವಿದ್ಯಾಲಯ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದೆ. ಡಿಡಿಯು-ಬಿಕೆವೈ, ಸಂಕಲ್ಪ ಯೋಜನೆಯಡಿ ಜಿಲ್ಲೆಯಲ್ಲಿರುವ ೨೦೦೦ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು.
ಈ ಉದ್ಯೋಗ ಮೇಳದಲ್ಲಿ ಸುಮಾರು ೫೦ ವಿವಿಧ ಕಂಪನಿಗಳು ಭಾಗವಹಿಸಲಿವೆ. ಈ ಕಂಪನಿಗಳು ನೇರವಾಗಿ ನಿರುದ್ಯೋಗಗಳನ್ನು ಸಂದರ್ಶಿಸಿ ತಮ್ಮ ಕಂಪನಿಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಉದ್ಯೋಗ ಮೇಳವು ಅಂದು ಬೆಳಿಗ್ಗೆ ೯.೩೦ಕ್ಕೆ ವೇದಿಕೆ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಳ್ಳಲಿದೆ. ಒಂದು ದಿನ ನಡೆಯುವ ಈ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕರು ಭಾಗವಹಿಸುವ ನಿಟ್ಟಿನಲ್ಲಿ ಹೆಚ್ಚಿನ ಪ್ರಚಾರ ಮಾಡುವ ಮೂಲಕ ಹೆಚ್ಚಿನ ಅಭ್ಯರ್ಥಿಗಳು ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವAತೆ ಸಂಬAಽಸಿದ ಅಽಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮುಖ್ಯ ಯೋಜನಾಽಕಾರಿ ಡಾ.ಟಿ.ರೋಣಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಽಕಾರಿ ಡಾ.ಜಿ.ಯು.ಹುಡೇದ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ್ ಯಂಕAಚಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಟಿ.ತಿರುಮಲೇಶ್ವರ, ಜಿಲ್ಲಾ ಉದ್ಯೋಗಾಽಕಾರಿ ನವೀನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಽಕಾರಿಗಳು, ಉದ್ಯಮಿಗಳು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಇದ್ದರು.