ವಿವಿಧ ಮಹನೀಯರ ಜಯಂತಿಗಳ ಪೂರ್ವಭಾವಿ ಸಭೆ

1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಽಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು.

ಅಪರ ಜಿಲ್ಲಾಽಕಾರಿ ಗೀತಾ ಮಾತನಾಡಿ, ಫೆ. 1ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿ, ಫೆ. 5ರಂದು ಶ್ರೀ ಸವಿತಾ ಮಹರ್ಷಿ ಜಯಂತಿ ಹಾಗೂ 10ರಂದು ಕಾಯಕ ಶರಣರ ಜಯಂತಿಯನ್ನು ಎಲ್ಲ ಸಮಾಜದ ಮುಖಂಡರ, ಸಾರ್ವಜನಿಕರ ಸಹಕಾರದಲ್ಲಿ ಆಚರಿಸಲಾಗುವುದು ಎಂದರು.

ಜಯ0ತಿಯ ದಿನಗಳಂದು ಬೆಳಗ್ಗೆ 11 ಗಂಟೆಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಮಹಾತ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ವಿಶೇಷ ಉಪನ್ಯಾಸ, ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಮಹಾತ್ಮರ ಭಾವಚಿತ್ರದ ಭವ್ಯ ಮೆರವಣೆಗೆಯನ್ನು ನಗರದಲ್ಲಿ ಆಯೋಜಿಸಲಾಗುತ್ತದೆ. ಇದರಲ್ಲಿ ಕಲಾ ತಂಡಗಳು ಭಾಗವಹಿಸಲಿವೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಇಲಾಖೆಗಳ ಅಽಕಾರಿಗಳು, ವಿವಿಧ ಸಮಾಜಗಳ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net