ಆ.24ರಂದು ಸ್ಮರಣ ಸಂಚಿಕೆ ಬಿಡುಗಡೆ: ಜಿಲ್ಲಾಧಿಕಾರಿ ಡಾ.ಕುಮಾರ ಮಾಹಿತಿ

Pre-meeting of the commemorative issue release programme Mandya
Published on

ಮಂಡ್ಯ: ನಗರದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಆ.24ರಂದು ಮಧ್ಯಾಹ್ನ 3 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಿಜೃಂಭಣೆಯಿಂದ ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಲ್ಲದಾರತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವ ವೇದಿಕೆಯಲ್ಲಿ ವಿನ್ಯಾಸವನ್ನು ಬ್ಯಾಕ್‌ಡ್ರಾಪ್‌ನಲ್ಲಿ ಹಾಗೂ ಮುಖ್ಯ ಸ್ಥಳಗಳಲ್ಲಿ ಪ್ರಚಾರಪಡಿಸಿ ಎಂದರು.

ಸ್ಮರಣಾ ಸಂಚಿಕೆ ಕಾರ್ಯಕ್ರಮದಲ್ಲಿ ಕನ್ನಡ , ರೈತ ಹಾಗೂ ವಿವಿಧ ಸಂಘಟನೆಗಳು ಸೇರಿದಂತೆ ಶಾಲೆಗಳ ಕನ್ನಡ ಶಿಕ್ಷಕರು, ಪದವಿ ಹಾಗೂ ಸ್ನಾತಕೋತ್ತರ ಪದವಿಯ ಕನ್ನಡ ವಿದ್ಯಾರ್ಥಿಗಳು ಭಾಗವಹಿಸುವಂತೆ ಕೋರಿ ಆಹ್ವಾನಿಸಲಾಗಿದೆ. ಇದು ಜಿಲ್ಲೆಯ ಹಿರಿಮೆಯ ಕಾರ್ಯಕ್ರಮವಾಗಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ. ಸ್ವಾಗತ ಸಮಿತಿಯ ಅಧ್ಯಕ್ಷರು ಸೇರಿದಂತೆ ಎಲ್ಲ ಸದಸ್ಯರು, ಸಮ್ಮೇಳನದ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಕಸಾಪ ಸದಸ್ಯರು, ವಿವಿಧ ಸಮಿತಿ ಸದಸ್ಯರನ್ನು ಆಹ್ವಾನಿಸಿ. ಸಂಚಿಕೆಯ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಲು ಉತ್ತಮ ಸಾಹಿತಿಯನ್ನು ಆಯ್ಕೆ ಮಾಡುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಇದು ಕನ್ನಡ ನಾಡು ನುಡಿಯನ್ನು ಬಿಂಬಿಸುವ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಯಾವುದೇ ಲೋಪ ಉಂಟಾಗದಂತೆ ಸಂಘಟಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಾಹಿತಿಗಳಾದ ತೈಲೂರು ವೆಂಕಟಕೃಷ್ಣ, ಡಾ.ಚಿಕ್ಕಮರಳಿ ಬೋರೇಗೌಡ, ಧರಣೇಂದ್ರಯ್ಯ, ಮೃತ್ಯುಂಜಯ, ಪ್ರದೀಪ್ ಕುಮಾರ್ ಹೆಬ್ರಿ, ವಿ.ಹರ್ಷ, ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net