

ಮೈಸೂರು ಜಿಲ್ಲೆಯಲ್ಲಿ ಮೇ 24 ರಿಂದ 28ರವರೆಗೆ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ತುಂತುರುವಿನಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 24 ರಂದು 7 ಮಿ.ಮೀ., 25 ರಂದು 10, 26 ರಂದು 11, 27 ರಂದು 5 ಹಾಗೂ 28 ರಂದು 4 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಕನಿಷ್ಠ 22 ಹಾಗೂ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ. ಪ್ರಕಾಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೇಸಿಗೆ ಬೆಳೆಗಳ ಕೊಯ್ಲು ಮಾಡಿದ ನಂತರ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪೂರ್ವ ಮುಂಗಾರು ಬಿತ್ತನೆಗೆ ಸೂಕ್ತ ರೀತಿಯಲ್ಲಿ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.