ಗಿಡ ನಾಟಿ ಪೂರ್ವಭಾವಿ ಸಭೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ ಅರಣ್ಯೀಕರಣ

naati
ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ಗಿಡ ನಾಟಿ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.
Published on

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದ ಅಂಗವಾಗಿ ಆಲಂಪುರಿ ಸಾಲುಮರ ತಿಮ್ಮಕ್ಕ ವೃಕ್ಷೋದ್ಯಾನದಲ್ಲಿ ನಡೆಯುವ ಗಿಡ ನಾಟಿ ಕಾರ್ಯಕ್ರಮದ ಪೂರ್ವಭಾವಿ ಸಮಾಲೋಚನಾ ಸಭೆ ವಗ್ಗ ಗ್ರಾಪಂ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ ಅಧ್ಯಕ್ಷತೆಯಲ್ಲಿ ಜರುಗಿತು.

ಪಚ್ಚಾಜೆ ಸಭಾಂಗಣದ ಮುಖ್ಯಸ್ಥ ಜಿನರಾಜ್ ಆರಿಗ ಚಾಲನೆ ನೀಡಿದರು. ಯೋಜನೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮಾಹಿತಿ ನೀಡಿದರು.ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಮಾಹಿತಿ ನೀಡಿದರು.

ಪ್ರಮೋದ್ ರೈ, ಜಿಪಂ ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್, ಸುಲೋಚನಾ ಭಟ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ, ಶಿವಪ್ಪಗೌಡ, ಗ್ರಾಪಂ ಮಾಜಿ ಸದಸ್ಯ ಮಾಣಿಕ್ಯ ರಾಜ ಜೈನ್, ಜನಜಾಗೃತಿ ವೇದಿಕೆ ಅಧ್ಯಕ್ಷ ಪುರುಷೋತ್ತಮ್, ಉದ್ಯಮಿ ಸುತಂಜನ್ ಜೈನ್, ಜನಜಾಗೃತಿ ಸದಸ್ಯರಾದ ನವೀನ್ ಚಂದ್ರ, ಆನಂದ ಆಚಾರಿ, ಜಯಚಂದ್ರ ಬೊಳ್ಮಾರ್, ಕಾರಿಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ವೀರೇಂದ್ರ ಅಮೀನ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಯೋಜನಾಧಿಕಾರಿ ಜಯವಂತ ಪಟಗಾರ, ಯೋಜನಾಧಿಕಾರಿ ಕಿಶೋರ್ ಕುಮಾರ್ ಎಂ, ಜಿನೇಂದ್ರ ಶೌರ್ಯ ಘಟಕದ ಕ್ಯಾಪ್ಟನ್ ಪ್ರಕಾಶ್, ಮಾಸ್ಟರ್ ನಿತಿನ್, ಮೋಹನ್ ಸಾಲಿಯಾನ್, ಉಮೇಶ್ ನಾರಾಯಣ್, ಶ್ರೀ ಗಾಯತ್ರಿ ದೇವಿ ದೇವಸ್ಥಾನದ ಕಾರ್ಯದರ್ಶಿ ಅಭಿಷೇಕ್, ವಲಯ ಅಧ್ಯಕ್ಷ ಉಮೇಶ್, ಪದ್ಮನಾಭ, ನವೀನ್, ವಸಂತ್, ದಿನೇಶ್ ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಸ್ವಾಗತಿಸಿದರು. ವಗ್ಗ ವಲಯ ಮೇಲ್ವಿಚಾರಕಿ ಸವಿತಾ ವಂದಿಸಿದರು. ಕೃಷಿ ಮೇಲ್ವಿಚಾರಕ ಜಯಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net