ಭವಿಷ್ಯ ರೂಪಿಸಿಕೊಳ್ಳಲು ಪ.ಪೂ.ಶಿಕ್ಷಣ ಉತ್ತಮ ತಳಹದಿ

gan (11)
Published on

ಗಂಗೊಳ್ಳಿ: ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣವು ಉತ್ತಮವಾದ ತಳಹದಿ ನೀಡುತ್ತದೆ. ಆದ್ದರಿಂದ ಸರಿಯಾದ ರೀತಿಯಲ್ಲಿ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ್ ಪೈ ಅಭಿಪ್ರಾಯಪಟ್ಟರು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್ ಶುಭ ಹಾರೈಸಿದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ. ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಕಚೇರಿಯ ಮುಖ್ಯಸ್ಥೆ ಪ್ರಮೋದಾ ಪೈ ಎಂ.ಜಿ. ಕಚೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕ ಪ್ರವೀಣ್ ಕಾಮತ್ ಸಿಬ್ಬಂದಿಯನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಸರ್ಗ, ಮನಾಲಿ, ಪ್ರಾರ್ಥನಾ ಪೈ, ಪೂರ್ವಿಕಾ, ಅದಿತಿ, ಸ್ಕಂದ, ಬಿಂದುಶ್ರೀ ಅವರನ್ನು ಅಭಿನಂದಿಸಲಾಯಿತು.

ಕಾಲೇಜಿನ ಸಂಸ್ಕೃತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್.ಸಿ. ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಸಹಕರಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್.ಕೆ. ವಂದಿಸಿದರು. ಹಿಂದಿ ಉಪನ್ಯಾಸಕ ನಾರಾಯಣ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net