

ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ರಾಜ್ಯ ಪುರಸ್ಕಾರ ಪೂರ್ವ ಸಿದ್ಧಾಂತ ಪರೀಕ್ಷೆಯ ಶಿಬಿರ ಕಾರ್ಯಕ್ರಮ ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆಸಲಾಯಿತು.
ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ನಾನೂ ಕೂಡ ಬಾಲ್ಯದಲ್ಲಿ ಬಿಷಫ್ ಕಾಟನ್ ಶಾಲೆಯಲ್ಲಿ ಕಬ್ಸ್ ಆಗಿ ನಂತರ ಸ್ಕೌಟ್ಸ್ ಆಗಿದ್ದೆ. ಸಂಸ್ಥೆಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ನಿಮಗೆ ನನ್ನ ಸಹಕಾರ ಇರುತ್ತದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ವಿಷಯ ಪರಿವೀಕ್ಷ ಡಾ.ಸಧಾಶಿವ ಪಲ್ಲೆದ್ ಮಾತನಾಡಿ, ಕೊಡಗಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದೆ. ರಾಜ್ಯ ಸಂಸ್ಥೆಯ ವತಿಯಿಂದ ನಡೆದ ಸಭೆಯಲ್ಲಿ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾರವರು ಕೊಡಗು ಜಿಲ್ಲೆಯನ್ನು ಪ್ರಶಂಸಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪ್ರದಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಗೂ ಜಿಲ್ಲಾ ಗೈಡ್ ಆಯುಕ್ತರಾದ ಐಮುಡಿಯಂಡ ರಾಣಿ ಮಾಚಯ್ಯ, ಜಿಲ್ಲಾ ಕಾರ್ಯದರ್ಶಿ ಎಂ.ಎಂ. ವಸಂತಿ, ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಸಹಕಾರ್ಯದರ್ಶಿ ಬೊಳ್ಳಜಿರ.ಬಿ.ಅಯ್ಯಪ್ಪ, ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿ ರಾವ್.ಎಚ್(ಗೈ), ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಅಜ್ಜಮಕ್ಕಡ ವಿನು ಕುಮಾರ್, ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ದೊಡ್ಡ ರಂಗೇಗೌಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿ ಕವಿತ, ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಹಲವಾರು ಮುಖಂಡರುಗಳು ಇದ್ದರು.