ಇಂದ್ರಧನುಷ್ ಲಸಿಕಾಕರಣದಲ್ಲಿ ಶೇ.100 ಗುರಿ ತಲುಪೋಣ

Pre-vaccination meeting in dc office
Pre-vaccination meeting in dc office
Published on

ಜಿಲ್ಲಾಧಿಕಾರಿ ಶಿವಶಂಕರ ಆಶಯ

ಮನೆ ಮನೆಗೆ ಭೇಟಿ ಮಾಡಿ ಮಾಹಿತಿ ನೀಡಲು ಸೂಚನೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಿಷನ್ ಇಂದ್ರಧನುಷ್ 5.0 ಕಾರ್ಯಕ್ರಮದ ಭಾಗವಾಗಿ ಅ.9ರಿಂದ 15ರವರೆಗೆ ಹಮ್ಮಿಕೊಂಡಿರುವ ಮೂರನೇ ಸುತ್ತಿನ ಲಸಿಕಾಕರಣದ ಯಶಸ್ವಿಗೆ ಅಧಿಕಾರಿಗಳು ಶ್ರಮಿಸುವ ಮೂಲಕ ಜಿಲ್ಲೆಯಲ್ಲಿ ಶೇ.100 ಗುರಿ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತಿನ ಲಸಿಕಾಕರಣ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯುವಿನ್ ತಂತ್ರಾಂಶದ ವರದಿಯಂತೆ ಸೆ.11 ರಿಂದ 16 ರವರೆಗೆ ನಡೆದ ಎರಡನೇ ಸುತ್ತಿನ ಲಸಿಕಾಕರಣದಲ್ಲಿ ಜಿಲ್ಲೆಯಲ್ಲಿ 5 ವರ್ಷದೊಳಗಿನ 2,340 ಮಕ್ಕಳಿಗೆ ಹಾಗೂ 644 ಗರ್ಭಿಣಿಯರಿಗೆ ಲಸಿಕೆ ನೀಡಲಾಗಿದೆ. ಎರಡನೇ ಸುತ್ತಿನಲ್ಲಿ ಶೇ.100 ಕ್ಕಿಂತ ಹೆಚ್ಚು ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳ ಕರ್ತವ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 2023ರ ಮಿಷನ್ ಇಂದ್ರಧನುಷ್ 5.0 ಮೂರನೇ ಸುತ್ತಿನಲ್ಲಿ ಲಸಿಕಾಕರಣ ಕ್ಯಾಂಪ್ ಮಾಡುವ ಮುಂಚಿತವಾಗಿ ಹೆಚ್ಚು ಪ್ರಚಾರ ಮಾಡಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ದಿನಾಂಕ ತಿಳಿಸಬೇಕು. ವಲಸೆ ಪ್ರದೇಶಗಳಲ್ಲಿ, ನಗರದ ಕೊಳೆಳಗೇರಿ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಿ ಲಸಿಕಾಕರಣ ಮಾಡಬೇಕು ಎಂದು ಸೂಚಿಸಿದರು.
ಮೊದಲ ಹಾಗೂ ಎರಡನೇ ಸುತ್ತಿನಲ್ಲಿ ಲಸಿಕೆ ಪಡೆಯದ 5 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಮೂರನೇ ಸುತ್ತಿನಲ್ಲಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಲು ಕ್ರಮ ವಹಿಸಿ, ಶೇ.100 ಪ್ರಗತಿ ಸಾಧಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net