

ಕೋಟ: ವಿದ್ಯಾರ್ಥಿಗಳಲ್ಲಿ ಎಳವೆಯಲ್ಲಿಯೇ ಸರ್ಕಾರದ ನೀತಿ ನಿಯಮ, ಸಂಸದೀಯ ನಡವಳಿಕೆ ರೂಢಿಸಿದರೆ ದೇಶದ ರಾಜಕೀಯ ವ್ಯವಸ್ಥೆಗೆ ಭದ್ರಬುನಾದಿ ಹಾಕಬಹುದು ಎಂದು ಕೊಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಹೇಳಿದರು. ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ವಿದ್ಯಾರ್ಥಿ ಸಭಾಪತಿ ಸಿಂಚನಾ ಶ್ರೇಯಾ, ನಾಯಕಿ ಪ್ರಜ್ಞಾ, ಉಪನಾಯಕಿ ಸಾನ್ವಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಜಗದೀಶ್ ಹೊಳ್ಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿದರು. ಶಿಕ್ಷಕರಾದ ಗಣೇಶ ಶೆಟ್ಟಿಗಾರ್, ಮಹಾಲಕ್ಷ್ಮೀ ಸೋಮಯಾಜಿ ಕಾರ್ಯಕ್ರಮ ಸಂಘಟಿಸಿದ್ದರು.