10.50 ಕೋಟಿ ಪಠ್ಯಪುಸ್ತಕಗಳಲ್ಲಿ ಸಂವಿಧಾನ ಪೀಠಿಕೆ

madhu bangarappa adress the media
Published on

ಶಿವಮೊಗ್ಗ: ಸಂವಿಧಾನ ಪೀಠಿಕೆ ವಾಚನವನ್ನು ಆರಂಭಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ. ಮಹಾತ್ಮಗಾಂಧಿ ಅವರ ಆದರ್ಶವನ್ನು ಪರಿಚಯಿಸುವ ಸಪ್ತಪಾತಕಗಳು, ಸಂವಿಧಾನದ ಪೀಠಿಕೆಯನ್ನು ಶಿಕ್ಷಣ ಇಲಾಖೆಯ ಎಲ್ಲ ವಿಷಯಗಳ ಸುಮಾರು 10.50 ಕೋಟಿ ಪಠ್ಯಪುಸ್ತಕಗಳಲ್ಲಿ ಮುದ್ರಿಸಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾರತ ಸಂವಿಧಾನದ ಆಶಯಗಳನ್ನು, ಅದರಲ್ಲಿನ ಮಾನವೀಯ ಮೌಲ್ಯಗಳನ್ನು ಸಾರ್ವಜನಿಕ ವಲಯದಲ್ಲಿ ಜಾಗೃತಗೊಳಿಸುವ ನಿಟ್ಟಿನಲ್ಲಿ ಸಂವಿಧಾನದ ಪೀಠಿಕೆಗೆ ಒತ್ತು ನೀಡಲಾಗಿದೆ. ಭಾರತದ ಪ್ರತಿಯೊಬ್ಬ ಪ್ರಜೆಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲಾದ ಸಂವಿಧಾನದಲ್ಲಿ ಸಾಮಾಜಿಕವಾಗಿ ಇರುವ ಮಹತ್ವದ ವಿಷಯ ಮತ್ತು ಅನೇಕ ಜನಪರ ಆಶಯಗಳನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net