ಜನಹಿತ ಕಾರ್ಯಕ್ರಮಕ್ಕೆ ಆದ್ಯತೆ

h17-modi birthday
Published on

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ 74ನೇ ಜನ್ಮದಿನ ನಿಮಿತ್ತ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ವತಿಯಿಂದ ಇಲ್ಲಿನ ಉಣಕಲ್ಲ್ ಸಾಯಿ ನಗರದ ಶ್ರೀ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಮಾತನಾಡಿದ ಶಾಸಕ ಟೆಂಗಿನಕಾಯಿ, ಮೋದಿ ಜನ್ಮದಿನ ನಿಮಿತ್ತ ಬಿಜೆಪಿಯಿಂದ ದೇಶದ ಎಲ್ಲ ರಾಜ್ಯಗಳಲ್ಲಿ ಜನಹಿತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೇವಾ ಸಪ್ತಾಹ ಮೂಲಕ ಜನರನ್ನು ತಲುಪಲಾಗುತ್ತಿದೆ ಎಂದರು. ಮೋದಿ ಭಾವಚಿತ್ರಗಳನ್ನು ಇದೇ ವೇಳೆ ಅನಾವರಣಗೊಳಿಸಲಾಯಿತು.

ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ರೂಪಾ ಶೆಟ್ಟಿ, ಚನ್ನು ಪಾಟೀಲ, ರವಿ ನಾಯಕ, ಕೆ.ಎಚ್. ಮಾಡಳ್ಳಿ, ಚನ್ನಪ್ಪಗೌಡ ಪಾಟೀಲ, ರಾಮನಗೌಡ ಶೆಟ್ಟನಗೌಡ, ಅಕ್ಕಮ್ಮದೇವಿ ಹೆಗಡೆ, ರಮೇಶ ಕಾಂಬಳೆ, ವಿಜಯಾ ಗುಡಗೇರಿ, ಬಾಬು ಹೋಟೆಲ್, ನವೀನ ಮಡಿವಾಳರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net