

ಬೆಳಗಾವಿ: ಹಿರೇಕೂಡಿ ಗ್ರಾಮದ ಮದುವೆ ಸಮಾರಂಭದಲ್ಲಿ ವಿಷಮಿಶ್ರಿತ ಆಹಾರ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವವರಿಗೆ ಆದ್ಯತೆ ಮೇರೆಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಸೂಚಿಸಿದರು.
ಬೆಳಗಾವಿ ನಗರದ ಜಿಲ್ಲಾಸ್ಪತ್ರೆ, ಚಿಕ್ಕೋಡಿ ಸಾರ್ವಜನಿಕರ ಆಸ್ಪತ್ರೆ, ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿ, ಚಿಕಿತ್ಸೆ ಪಡೆಯುತ್ತಿರುವವರಿಗೆ ಎಲ್ಲ ರೀತಿಯ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ವೈದ್ಯರು ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಶೀಘ್ರದಲ್ಲಿ ಎಲ್ಲರೂ ಗುಣಮುಖರಾಗಲಿದ್ದಾರೆ ಎಂದರು. ಆರೋಗ್ಯ ಅಧಿಕಾರಿ ಎಸ್.ಎಸ್.ಗಡಾದ, ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ ಇತರರಿದ್ದರು.