ಗರ್ಭಿಣಿ, ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಲಿ

ಗರ್ಭಿಣಿ, ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಲಿ
Published on

ಹಾಸನ: ಗರ್ಭಿಣಿ, ಬಾಣಂತಿ, ಹದಿಹರೆಯದ ಹೆಣ್ಣು ಮಕ್ಕಳು ಪ್ರತಿ ನಿತ್ಯ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕು. ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ. ದ್ರಾಕ್ಷಾಯಿಣಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆೆ ವತಿಯಿಂದ ಬೂವನಹಳ್ಳಿ ವ್ಯಾಪ್ತಿಯ ಎಚ್ ಮೈಲಹಳ್ಳಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೋಷಣ್ ಮಾಸಾಚಾರಣೆ ಹಾಗೂ ಪೌಷ್ಟಿಕ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಪೌಷ್ಟಿಕತೆಯ ಬಗ್ಗೆ ಗರ್ಭಿಣಿ, ಬಾಣಂತಿ, ಹದಿಹರೆಯದ ಹೆಣ್ಣು ಮಕ್ಕಳಿಗೆ ಕಾನೂನು ಅರಿವುಗಳ ಬಗ್ಗೆ ತಿಳಿಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಸಿ.ಜ್ಯೋತಿ ಲಕ್ಷ್ಮೀ ಮಾತನಾಡಿ, ಜನಸಾಮಾನ್ಯರು ಉಪಯೋಗಿಸುವ ಆಹಾರದ ಬಗ್ಗೆ, ಸಾವಯವ ಕೃಷಿ ಬಳಸಿ ಬೆಳೆಯುವ ಆಹಾರ ಪದಾರ್ಥ ಹಾಗೂ ಹಣ್ಣು, ತರಕಾರಿಗಳನ್ನು ಬಳಸಲು, ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ರಕ್ತಹೀನತೆ ಹಾಗೂ ಅವರ ಆಹಾರ ಪದ್ಧತಿ ಬಗ್ಗೆ ಮಾಹಿತಿ ನೀಡಿದರು.

ಇಲಾಖೆಯಿಂದ ಸಿಗುವ ಪೂರಕ ಪೌಷ್ಟಿಕ ಆಹಾರ, ಮೊಟ್ಟೆ ವಿತರಣೆ, ಹಿರಿಯ ನಾಗರಿಕರು, ಅಂಗವಿಕಲ ಮಕ್ಕಳಿಗೆ ಇಲಾಖೆಯಿಂದ ಸಿಗುವ ಸೌಲಭ್ಯಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕರು, ಬಾಲ ನ್ಯಾಯ ಮಂಡಳಿ, ಬಾಲಾಪರಾಧಿ ಮತ್ತು ಬುದ್ಧಿಮಾಂಧ್ಯ ಮಕ್ಕಳ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆಯಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಸಿ.ಗಂಗಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net