ಗರ್ಭಿಣಿಯರು ಸ್ವಚ್ಛತೆಗೆ ಆದ್ಯತೆ ನೀಡಲಿ

arakera
ಅರಕೇರಾ ಸಮೀಪದ ಜುಟಮರಡಿಯಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ ಮಾಸಾಚರಣೆ ಜಾಗೃತಿ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ ಕಾರ್ಯ ಶುಕ್ರವಾರ ಮಾಡಲಾಯಿತು. ಗ್ರಾಪಂ ಅಧ್ಯಕ್ಷೆ ಬಾಲಮ್ಮ ಶಾಂತಪ್ಪ, ಉಪಾಧ್ಯಕ್ಷ ಗೋವಿಂದ ಚವ್ಹಾಣ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ, ಶೃತಿ ಸಂಸ್ಕೃತಿ ಸಂಸ್ಥೆ ಸಂಯೋಜಕ ರಾಮಣ್ಣ ಎನ್.ಗಣೇಕಲ್, ಅಂಗನವಾಡಿ ಕಾರ್ಯಕರ್ತೆ ರಾಘಮ್ಮ ಇತರರಿದ್ದರು.
Published on

ಅರಕೇರಾ: ಪೌಷ್ಟಿಕ ಆಹಾರ ಸೇವನೆಯಿಂದ ಗರ್ಭಿಣಿಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಅಂಗನವಾಡಿ ಮೇಲ್ವಿಚಾರಕಿ ಶಾಂತಬಾಯಿ ಹೇಳಿದರು.

ಮಹಿಳೆಯರು ಗರ್ಭಾವಸ್ಥೆಯಲ್ಲಿ ಅನೇಕ ಆರೋಗ್ಯ ಸಮಸ್ಯೆ

ಸಮೀಪದ ಜುಟಮರಡಿಯಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು.

ಮಹಿಳೆಯರು ಗರ್ಭಾವಸ್ಥೆಯಲ್ಲಿ ಅನೇಕ ಆರೋಗ್ಯ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇದರಿಂದ ರಕ್ತ ಹೀನತೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತವೆ. ಹಾಗಾಗಿ ವಿವಿಧ ಬಗೆಯ ಕಾಳು, ತರಕಾರಿ ಹಾಗೂ ಮೊಟ್ಟೆ ಸೇವಿಸಬೇಕು. ಜತೆಗೆ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ಶೃತಿ ಸಂಸ್ಕೃತಿ ಸಂಸ್ಥೆ ಸಂಯೋಜಕ ರಾಮಣ್ಣ ಎನ್ ಗಣೇಕಲ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಮಾಹಿತಿ ಕೊರತೆಯಿಂದ ಸೂಕ್ತ ಕ್ರಮಗಳನ್ನು ಅನುಸರಿಸುವುದಿಲ್ಲ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿಸಬೇಕು ಎಂದರು.

ಗರ್ಭಿಣಿಯರಿಗೆ ಸೀಮಂತ ಹಾಗೂ ಬಾಣಂತಿಯರಿಗೆ ಅನ್ನಪ್ರಸಾನ ಕಾರ್ಯಕ್ರಮ ಜರುಗಿತು. ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಬಾಲಮ್ಮ ಶಾಂತಪ್ಪ, ಉಪಾಧ್ಯಕ್ಷ ಗೋವಿಂದ ಚವ್ಹಾಣ್, ಪಿಡಿಒ ಸೋಮನಾಥ ರಾಠೋಡ್, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ, ಶೃತಿ ಸಂಸ್ಕೃತಿ ಸಂಸ್ಥೆ ಸಂಯೋಜಕ ರಾಮಣ್ಣ ಎನ್.ಗಣೇಕಲ್, ಗ್ರಾಪಂ ಸದಸ್ಯರಾದ ಯಮ್ಮಮ್ಮ ಭರಮಯ್ಯ, ಬಸವರಾಜ, ಪಂಪನಗೌಡ, ಬಾಲಮ್ಮ, ಅಂಗನವಾಡಿ ಕಾರ್ಯಕರ್ತೆ ರಾಘಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net