ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಲಿ

sirigere
Published on

ಸಿರಿಗೆರೆ: ಮಕ್ಕಳು ಆರೋಗ್ಯದಿಂದ ಕೂಡಿರಬೇಕಾದರೆ ಉತ್ತಮ ಆಹಾರ ಸೇವನೆ ಅತಿ ಅವಶ್ಯಕ ಎಂದು ಡಾ. ಮಹೇಶ್ ಸಲಹೆ ನೀಡಿದರು.
ಸಿರಿಗೆರೆ ಸಮೀಪದ ಕಡ್ಲೆ ಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಿಸಿಯೂಟ, ಹಾಲು, ಮೊಟ್ಟೆ ನೀಡುತ್ತಿದೆ. ಪ್ರತಿಯೊಬ್ಬರೂ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.
ಮಕ್ಕಳು ತರಕಾರಿಗಳನ್ನು ತೆಗೆದಿಟ್ಟು ಊಟ ಮಾಡುತ್ತಿರುವ ಬೆಳವಣಿಗೆ ಹೆಚ್ಚಾಗುತ್ತಿದೆ. ಈಗಿನ ಕಾಲದ ಮಕ್ಕಳು ಬೇಕರಿ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಿ ಸ್ಥೂಲಕಾಯರಾಗುತ್ತಿರುವುದು ವಿಷಾದನೀಯ. ಪೋಷಕರು ಇಂತಹ ಅಹಿತಕರ ಅಭ್ಯಾಸ ತಡೆಗಟ್ಟಬೇಕು ಎಂದು ತಿಳಿಸಿದರು.
ಮನೆಗಳಲ್ಲಿ ಸಿರಿಧಾನ್ಯಗಳ ಬಳಕೆ ಹೆಚ್ಚಾಗಬೇಕು. ಸಜ್ಜೆ, ನವಣೆ, ರಾಗಿ, ಅರ್ಕ ಮೊದಲಾದ ಧಾನ್ಯಗಳ ಬಳಕೆ ಹೆಚ್ಚಾಗಬೇಕಿದೆ. ತಟ್ಟೆಲಿರುವ ಎಲ್ಲ ಲ್ಲ ತರಕಾರಿಗಳನ್ನು ಸೇವಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು.
ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಅಕ್ಷರ ದಾಸೋಹದ ಅಡಿಯಲ್ಲಿ ಬಿಸಿಯೂಟ ನೀಡುತ್ತಿದೆ. ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು ಎಂದು ಹೇಳಿದರು.
ಶಿಕ್ಷಕರಾದ ಮಂಜುನಾಥ್, ನಟರಾಜ್ ನಾಗರಾಜ್ ಮಂಜಪ್ಪ ಮಹಾಂತೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net