

ಮೈಸೂರು: ಫೆ.15 ರಂದು ಶ್ರೀ ಸಂತ ಸೇವಾಲಾಲ್ ಜಯಂತಿ, ಫೆ.16 ರಂದು ಸವಿತಾ ಮಹರ್ಷಿ ಜಯಂತಿ, ಫೆ.19 ರಂದು ಛತ್ರಪತಿ ಶಿವಾಜಿ ಜಯಂತಿ ಹಾಗೂ ಫೆ.20 ರಂದು ಸಂತ ಕವಿ ಸರ್ವಜ್ಞ ಜಯಂತಿಯ ಆಚರಣೆ ಸಂಬoಧ, ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯನ್ನು ಫೆ.9 ರಂದು ಸಿದ್ದಾರ್ಥನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 11.00 ಕ್ಕೆ ಶ್ರೀ ಸಂತ ಸೇವಾಲಾಲ್ ಜಯಂತಿ, 11.15 ಕ್ಕೆ ಸವಿತಾ ಮಹರ್ಷಿ ಜಯಂತಿ, 11.30 ಕ್ಕೆ ಛತ್ರಪತಿ ಶಿವಾಜಿ ಜಯಂತಿ, 11.45 ಕ್ಕೆ ಸಂತ ಕವಿ ಸರ್ವಜ್ಞ ಜಯಂತಿಯ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ.ಡಿ.ಸುದರ್ಶನ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.