ಹೆಬ್ರಿ ಸಮಿತಿ ಪೂರ್ವಭಾವಿ ಸಭೆ

meeting
ಹೆಬ್ರಿ ವಲಯ ವ್ಯಾಪ್ತಿಯ ಸಮಿತಿ ಪೂರ್ವಭಾವಿ ಸಭೆ ನಡೆಯಿತು. ನವದುರ್ಗಾ ಲೇಖನ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್, ಕಾರ್ಯಧ್ಯಕ್ಷ ಮುನಿಯಾಲು ಉದಯ್‌ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಮಿತಿ ಸದ್ಯಸರು ಉಪಸ್ಥಿತರಿದ್ದರು
Published on

ಹೆಬ್ರಿ: ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನಃ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಸುವ ಬಗೆಗೆ ಹೆಬ್ರಿ ಬಂಟರ ಭವನದಲ್ಲಿ ಇತ್ತೀಚೆಗೆ ಹೆಬ್ರಿ ವಲಯ ವ್ಯಾಪ್ತಿಯ ಸಮಿತಿ ಪೂರ್ವಭಾವಿ ಸಭೆ ನಡೆಯಿತು.

ನವದುರ್ಗಾ ಲೇಖನ ಸಮಿತಿ ಅಧ್ಯಕ್ಷ ಕೆ.ರಘುಪತಿ ಭಟ್ ನವದುರ್ಗಾ ಲೇಖನ ಯಜ್ಞದ ಕುರಿತು ಮಾಹಿತಿ ನೀಡಿ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಕಾರ್ಯಧ್ಯಕ್ಷ ಮುನಿಯಾಲು ಉದಯ್‌ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಬಾಲಾಜಿ, ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಸಮಿತಿ ಸದ್ಯಸರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net