ಸ್ವಾತಂತ್ರೃ ದಿನಾಚರಣೆ ಬಗ್ಗೆ ಪೂರ್ವಭಾವಿ ಸಭೆ

indi
Published on

ಮಂಗಳೂರು: ಜಿಲ್ಲಾಡಳಿತ ವತಿಯಿಂದ ಅಗಸ್ಟ್ 15 ರಂದು ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮ ನಡೆಸುವ ಪ್ರಯುಕ್ತ ಪೂರ್ವಭಾವಿ ಸಭೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರು ಮಾತನಾಡಿ ಸ್ವಾತಂತ್ರೃ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಕಜಾರೋಹಣ ನೆರವೇರಿಸಿ ಪಥ ಸಂಚಲನ ಗೌರವ ಸ್ವೀಕರಿಸಿ, ಸ್ವಾತಂತ್ರೃ ಸಂದೇಶ ನೀಡಲಿದ್ದಾರೆ ಎಂದರು. ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಅವರು ಸೂಚಿಸಿದರು. ಮಂಗಳೂರಿನಲ್ಲಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದರು.

ನೆಹರು ಮೈದಾನದಲ್ಲಿ ಸ್ವಾತಂತ್ರೃ ದಿನಾಚರಣೆಗೆ ಕಾರ್ಯಕ್ರಮದ ಎಲ್ಲಾ ಸಿದ್ಧತೆಗಳನ್ನು ಮಾಡಲು ಅವರು ಮಹಾನಗರ ಪಾಲಿಕೆಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net