ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆ

bjp
Published on

ವಿಜಯವಾಣಿ ಸುದ್ದಿಜಾಲ ಉಳ್ಳಾಲ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಇದರಿಂದಾಗಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ಪ್ರತಿಪಕ್ಷದ ಸದಸ್ಯರ ಮತಗಳೂ ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ವಿಧಾನಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಮುಡಿಪು ಕಂಬ್ಲಪದವು ಶ್ರೀ ದುರ್ಗಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಮಂಗಳೂರು ಮಂಡಲ ಬಿಜೆಪಿ ಪ್ರಮುಖರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಅ.15ರಂದು ಬಂಟ್ವಾಳದ ಬಂಟರ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಿ ಚುನಾವಣೆ ವಿಜಯದ ಕಹಳೆ ಮೊಳಗಿಸಲಿದ್ದಾರೆ ಎಂದರು.

ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ್ ಆಳ್ವ ಕುವತ್ತಬೈಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಮಂಡಲ ಪ್ರಭಾರಿ ದಿನೇಶ್ ಅಮ್ಟೂರ್, ವಕ್ತಾರ ಮೋಹನ್ ರಾಜ್ ಕೆ.ಆರ್., ದೇವದಾಸ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟು, ಸುಜಿತ್ ಮಾಡೂರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net