

ಹುಬ್ಬಳ್ಳಿ : ಇಲ್ಲಿನ ಅರವಿಂದ ನಗರದ ಮಹಾನಗರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ನೂತನ ಪದಾಧಿಕಾರಿಗಳ ಆಯ್ಕೆಯ ಪೂರ್ವಭಾವಿ ಸಭೆ ಇತ್ತೀಚೆಗೆ ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಬಿಜೆಪಿಯಲ್ಲಿ ಬೂತ್ ಮಟ್ಟದ ಅಧ್ಯಕ್ಷರು ಸೇರಿದಂತೆ ಇನ್ನುಳಿದ ಪದಾಧಿಕಾರಿಗಳಿಗೆ ವಿಶೇಷ ಮಹತ್ವ ಇದೆ ಎಂದರು.
ಆಸಕ್ತರು ಅರ್ಜಿಯನ್ನು ಮಂಡಲ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ನೀಡಬೇಕು. ಪಕ್ಷ ನೀಡುವ ಕೆಲಸವನ್ನು ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ತಿಳಿಸಿದರು.
ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಿಗೆ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರ ಮುಂಚೂಣಿಯಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಈ ಕ್ಷೇತ್ರ ಹೆಚ್ಚು ಲೀಡ್ ನೀಡಿದೆ ಎಂದರು.
ಹು-ಧಾ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಶಿವು ಮೆಣಸಿನಕಾಯಿ, ಮಾಜಿ ಮೇಯರ್ ವೀಣಾ ಬರದ್ವಾಡ, ಮಹೇಂದ್ರ ಕೌತಾಳ, ಪಾಲಿಗೆ ಸದಸ್ಯರಾದ ಉಮೇಶ್ ಗೌಡ ಕೌಜಗೇರಿ, ಎಂ.ವೈ. ನರಗುಂದ, ಬೀರಪ್ಪ ಕಂಡೇಕಾರ, ಉಮಾ ಮುಕುಂದ, ಅಶೋಕ ವಾಲ್ಮೀಕಿ, ವಕ್ತಾರ ರವಿ ನಾಯಕ ಹಾಗೂ ಇತರರು ಇದ್ದರು.