ಡಿ.30ರಂದು ಪೂರ್ವಭಾವಿ ಸಭೆ

29 SARAG 1
ಸರಗೂರು ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಕೆಂಡಗಣ್ಣ ಸ್ವಾಮಿ ಮಾತನಾಡಿದರು.
Published on

ಸರಗೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜ.17ರಂದು ಸರಗೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಚರ್ಚಿಸಲು ಡಿ.30ರಂದು ತಾಲೂಕು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಮ್ಮೇಳನದ ಅಧ್ಯಕ್ಷರ ಆಯ್ಕೆ ಸಮಿತಿಗಳ ರಚನೆ, ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಲು ಪರಿಷತ್ತಿನ ಪದಾಧಿಕಾರಿಗಳು ಹಾಗೂ ಸದಸ್ಯರು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಲು ಶುಕ್ರವಾರ ಕಸಾಪ ಸಭೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ ಮನವಿ ಮಾಡಿದರು.

ಪ್ರಧಾನ ಕಾರ್ಯದರ್ಶಿ ನಿಂಗರಾಜು, ಜಂಟಿ ಕಾರ್ಯದರ್ಶಿ ಮಹೇಶ್, ಸಹ ಕಾರ್ಯದರ್ಶಿ ರಘುರಾಮ್, ನಾಗರಾಮ್, ವರ್ತಕರ ಸಂಘದ ಡೆಗ್ಲಾರಾಮ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ, ಸೋಮಶೇಖರ್, ಅದಿಕರ್ನಾಟಕ ಮಹಾಸಭಾ ಪ್ರಧಾನ ಕಾರ್ಯದರ್ಶಿ ಚನ್ನೀಪುರ ಮಲ್ಲೇಶ್, ರಾಜ್ಯ ಸರ್ಕಾರಿ ನೌಕಕರ ಸಂಘದ ತಾಲೂಕು ಆಧ್ಯಕ್ಷ ಸೋಮಶೇಖರ, ಎಸ್.ಬಂಗಾರಶೆಟ್ಟರು, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎ.ರಾಜು ಬಂಡಳ್ಳಿ, ಸಣ್ಣಸ್ವಾಮಿ, ಬಂಗಾರಯ್ಯ ಶಂಭುಮೂರ್ತಿ, ಪಿಡಿಒ ಮಲ್ಲೇಶ್ ಮಹೇಂದ್ರ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net