

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜ. 14ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ, ಜ. 19ರಂದು ಮಹಾಯೋಗಿ ಶ್ರೀ ವೇಮನ ಜಯಂತಿ ಹಾಗೂ ಜ. 21ರಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜ. 7ರಂದು ಬೆಳಗ್ಗೆ 11 ಗಂಟೆಗೆ ಆಲೂರು ವೆಂಕಟರಾವ್ ಭವನದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.