ಗೆಲುವಿನ ಓಟಕ್ಕೆ ಮುನ್ನುಡಿ

23arsph1ep
ಉಪ ಚುನಾವಣೆ ಗೆಲುವಿನ ಹಿನ್ನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮೆಟ್ರೋ ಬಾಬು, ಶ್ರೀನಿವಾಸ್, ಗೌಸ್‌ಖಾನ್, ಮಂಜುನಾಥ್, ವೆಂಕಟಮುನಿ ಇದ್ದರು.
Published on

ಅರಸೀಕೆರೆ: ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಓಟಕ್ಕೆ ಮುನ್ನುಡಿ ಬರೆದಿವೆ ಎಂದು ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು ಹೇಳಿದರು.

ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿಯಲ್ಲಿ ಪಕ್ಷದ ಅಭ್ಯರ್ಥಿಗಳು ನಿರೀಕ್ಷೆಗೂ ಮೀರಿ ಗೆಲುವಿನ ಪತಾಕೆ ಹಾರಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಫಲ ನೀಡಿಲ್ಲ ಎಂಬುದು ಫಲಿತಾಂಶದಿಂದ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ. ಆದ್ದರಿಂದಲೇ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಣಾವರ ಶ್ರೀನಿವಾಸ್, ನಗರಸಭೆ ಸದಸ್ಯ ವೆಂಕಟಮುನಿ, ಮುಖಂಡರಾದ ಜಿಟಿಎಸ್ ಗೌಸ್ ಖಾನ್, ವೆಂಕಟೇಶ್, ಆಶ್ರಯ ಸಮಿತಿ ಸದಸ್ಯ ಅಣ್ಣಾದೊರೈ, ಸಿರಾಜ್ ಅಹಮದ್, ಗ್ರಾಪಂ ಮಂಜುನಾಥ್ ಸೇರಿದಂತೆ ಹಲವಾರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net