ಪ್ರೇಮ ಚಂದ್​ ಓರ್ವ ಸಾಮಾಜಿಕ ಸಾಹಿತಿ

1Anand2
Published on

ಬೆಳಗಾವಿ: ಭಾರತೀಯ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರಗಣ್ಯರಾದ ಸಾಹಿತಿ ಪ್ರೇಮ ಚಂದ್​ ಅವರ ಕೃತಿಗಳು ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಮೂಲಕ ಸಾಮಾಜಿಕ ಸಾಹಿತಿಯಾಗಿ ಗುರುತಿಸಿಕೊಂಡಿದ್ದರು ಎಂದು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಟಕ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎಂ.ಜಿ.ಹೆಗಡೆ ಅಭಿಪ್ರಾಯಪಟ್ಟರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಟಕ ಮಹಾವಿದ್ಯಾಲಯದಲ್ಲಿ ಹಿಂದಿ ವಿಭಾಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಹಿಂದಿ ಸಾಹಿತಿ ಪ್ರೇಮ ಚಂದ್​ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಸಾಹಿತಿ ಪ್ರೇಮ ಚಂದ್​ ಅವರು ನಡೆದು ಬಂದ ದಾರಿ ಎಲ್ಲರಿಗೂ ಮಾದರಿಯಾಗಿದ್ದು, ಅವರು ಹಿಂದಿ ಭಾಷೆಯಲ್ಲಿ ಅಗ್ರಗಣ್ಯ ಸಾಹಿತಿಯಾಗಿದ್ದು, ಸಾಹಿತ್ಯದಿಂದ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಎಂದರು. ಹಿಂದಿ ವಿಭಾಗದ ಮುಖ್ಯಸ್ಥ ಡಾ.ಎಂ.ಎಂ.ಮುತವಲಿ, ಡಾ.ದೀಪಾ ಅಂಟಿನ, ಉಜ್ವಲಾ ಪಾಟೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net