

ಕೋಟ: ಮಣೂರು ಮಹಾಲಿಂಗೇಶ್ವರ ಸಭಾಂಗಣದಲ್ಲಿ ಮಾ.9ರಂದು ಬೆಳಗ್ಗೆ 10ಕ್ಕೆ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರವನ್ನು ಕೋಟ ಸಾಮಾಜಿಕ ಕಾರ್ಯಕರ್ತೆ ಪ್ರೇಮಾ ಎಸ್.ಶೆಟ್ಟಿ ಅವರಿಗೆ ಪ್ರದಾನಿಸಲಾಗುವುದು. ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಸಹಯೋಗ ವಹಿಸಲಿದೆ ಎಂದು ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.