ಮೂರನೇ ಅಲೆ ಎದುರಿಸಲು ಸಿದ್ಧತೆ

bommayi
Published on

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ನಿರ್ಮಾಣ, ಅಗತ್ಯ ಬೆಡ್‌ಗಳ ವ್ಯವಸ್ಥೆ ಮತ್ತು ಚೈಲ್ಡ್ ವೆಂಟಿಲೇಟರ್ ಅಳವಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಸೋಮವಾರ ವಿಡಿಯೋ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಬ್ಲಾೃಕ್ ಫಂಗಸ್ ಚಿಕಿತ್ಸೆಯನ್ನು ಎಬಿಆರ್‌ಕೆ ಯೋಜನೆಯಡಿ ಸೇರಿಸಿ ಚಿಕಿತ್ಸೆ ಅವಕಾಶ ನೀಡಬೇಕು. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿ ಕೋರಿದರು. ಶಾಸಕ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಆರ್.ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮೊದಲಾದವರು ಸಭೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net