ಜಿಲ್ಲೆಯಾದ್ಯಂತ ಸಂವಿಧಾನ ದಿನಾಚರಣೆ ಸಿದ್ಧತೆ

20ALD01
ಅಳವಂಡಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದ ಉತ್ಸವ ಕಾರ್ಯಕ್ರಮವನ್ನು ಶ್ರೀಮರುಳಾರಾದ್ಯ ಶಿವಾಚಾರ್ಯರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಪ್ರಮುಖರಾದ ಸೋಮನಗೌಡ, ಅಶೋಕ, ಅನ್ವರ, ರೇಣುಕಪ್ಪ, ಮಂಜುನಾಥ, ಶಾರವ್ವ, ಜಂಬುನಾಥ ಇತರರಿದ್ದರು.
Published on

ಮಡಿಕೇರಿ: 

ಸಂವಿಧಾನ ದಿನಾಚರಣೆ ಪ್ರಯುಕ್ತ ಜ., 26 ರಿಂದ 22 ದಿನಗಳ ಕಾಲ ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದರು.    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ಸಂಬಂಧ ವಿವಿಧ ಸಮಾಜದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು. 

ಸಂವಿಧಾನ ದಿನಾಚರಣೆ ಪ್ರಯುಕ್ತ ಜ. 26 ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಲಿದ್ದಾರೆ. ಬಳಿಕ ಜ. 27 ರಿಂದ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದ್ದು, ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು.

ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸುವುದು ಸಂವಿಧಾನದ ಅತಿ ಮುಖ್ಯ ಆಶಯವಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ ಎಂದು  ಹೇಳಿದರು. 

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾಹಿತಿ ನೀಡಿ, ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ  ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಹೋಬಳಿವಾರು ನೋಡಲ್ ಅಧಿಕಾರಿಗಳು ಹಾಗೂ ಸಹಾಯಕ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾಯ ಗ್ರಾ.ಪಂ.ಗೆ ಬಂದಾಗ ಸ್ಥಳೀಯ ಪ್ರಮುಖರು, ಸಂಘ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಇತರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅಗತ್ಯ ಸಹಕಾರ ನೀಡುವಂತೆ ಕೋರಿದರು. 

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದಿವಾಕರ  ಮಾತನಾಡಿ ಸಂವಿಧಾನ ಜಾಗೃತಿ ಜಾಥಾಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಸಲಹೆ ಮಾಡಿದರು. 

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್  ಮಾತನಾಡಿ ಶಾಲಾ ಕಾಲೇಜುಗಳಲ್ಲಿ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸುವುದರ ಜೊತೆಗೆ, ಶಾಲಾ ದಿನಗಳಲ್ಲಿ ಪ್ರಾರ್ಥನೆ ಸಂದರ್ಭದಲ್ಲಿ ‘ಸಂವಿಧಾನ ಪೀಠಿಕೆ’ ವಾಚಿಸುವಂತಾಗಬೇಕು ಎಂದು ಸಲಹೆ ಮಾಡಿದರು. 

 ಶಿಕ್ಷಣಾಧಿಕಾರಿ ಮಹದೇವಸ್ವಾಮಿ,  ಪ್ರಮುಖರಾದ ಖಾಲಿದ್, ಎಸ್.ಎಂ.ಚಂಗಪ್ಪ, ಗಂಗಾಧರ, ಚಂದ್ರಪ್ರಸಾದ್, ಸಂತೋಷ್, ರಮೇಶ್, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರ ಬಸಪ್ಪ, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಕುಡಿಯುವ ನೀರು ವಿಭಾಗದ ಎಂಜಿನಿಯರ್ ಸುರೇಶ್ ಕುಮಾರ್ ಇತರರು ಇದ್ದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net