

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏ.26ರಂದು ನಡೆಯುವ ಮತದಾನಕ್ಕೆ ಯಾವುದೇ ಗೊಂದಲ ಇಲ್ಲದೇ ನಿರ್ಭೀತಿಯಿಂದ ಮತದಾನ ಮಾಡಲು ಜಿಲ್ಲಾ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 20,92,222 ಮತದಾರರಿದ್ದು, 10,26,324 ಪುರುಷರು, 10,65,714 ಮಹಿಳೆಯರು ಹಾಗೂ 184 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಇದ್ದಾರೆ. ಕ್ಷೇತ್ರದಲ್ಲಿ ಒಟ್ಟು 2202 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಈ ಎಲ್ಲ ಕೇಂದ್ರಗಳಿಗೆ ಒಟ್ಟಾರೆ 9809 ಮತಗಟ್ಟೆ ಅಧಿಕಾರಿ, ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.