

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭವನ್ನು ಜ.26ರಂದು ಬೆಂಗಳೂರಿನ ಮಹಾತ್ಮಾ ಗಾಂಧಿ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಿ, ಎಲ್ಲರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೇಶ ಭಕ್ತಿಯ ಪ್ರತೀಕವಾಗಿರುವ ಈ ಸಮಾರಂಭಕ್ಕೆ ಯಾವೆಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂಬುದನ್ನು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಇಂದಿನ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಏನೇನು ಸಿದ್ಧತೆ ನಡೆದಿದೆ?
* ಗಣರಾಜ್ಯೋತ್ಸವ ಅಂಗವಾಗಿ ಸಮಾರಂಭಕ್ಕಾಗಿ ಮೈದಾನವನ್ನು ಸಿದ್ಧಗೊಳಿಸಲಾಗಿರುತ್ತದೆ.
* ಶಾಮಿಯಾನ, ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿರುತ್ತದೆ.
* ವೇದಿಕೆಗೆ ಅಲಂಕಾರಿಕ ಟ್ರಾಸ್ ಪರಿಕರಗಳನ್ನು ಅಳವಡಿಸಲಾಗುತ್ತದೆ.
* ಧ್ವಜಾರೋಹಣ ಮಾಡಲು ಧ್ವಜ ಸ್ಥಂಭ ನಿರ್ಮಿಸಲಾಗಿರುತ್ತದೆ.
* ಬೆಳಿಗ್ಗೆ 8.58 ಗಂಟೆಗೆ ಕರ್ನಾಟಕ ಸರ್ಕಾರದ ಮಾನ್ಯ ರಾಜ್ಯಪಾಲರು ಆಗಮಿಸುತ್ತಾರೆ. ಭಾರತೀಯ ರಕ್ಷಣಾಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಮಾನ್ಯ ರಾಜ್ಯಪಾಲರಿಗೆ ಪರಿಚಯಿಸಲಾಗುತ್ತದೆ.
* ಮಾನ್ಯ ರಾಜ್ಯಪಾಲರು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುತ್ತಾರೆ.
* ಧ್ವಜಾರೋಹಣದ ನಂತರ ಮಾನ್ಯ ರಾಜ್ಯಪಾಲರು ಗೌರವರಕ್ಷೆ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾರೆ.
* ಗೌರವ ರಕ್ಷೆ ಸ್ವೀಕರಿಸುವ ತಾಲೀಮನ್ನು ದಿನಾಂಕ 22-01-2024, 23-01-2024 ಮತ್ತು 24-01-2024 ಒಟ್ಟು 3 ದಿನಗಳ ಕಾಲ ಸತತವಾಗಿ ನಡೆಸಲಾಗುತ್ತಿದೆ.
* ಪಥಸಂಚಲನದಲ್ಲಿ ಪೊಲೀಸ್/ಕೇರಳ ಪೊಲೀಸ್, ಸೈಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1150 ಮಂದಿ ಭಾಗವಹಿಸಲಿದ್ದಾರೆ.
* ಶಾಲಾ ಮಕ್ಕಳ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1500 ಮಕ್ಕಳು ಭಾಗವಹಿಸಲಿದ್ದಾರೆ.
* ಸಾಂಸ್ಕೃತಿಕ ಕಾರ್ಯಕ್ರಮಗಳ ನಂತರ ಮಾನ್ಯ ರಾಜ್ಯಪಾಲರಿಂದ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವಿರುತ್ತದೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಈ ಕೆಳಕಂಡಂತಿರುತ್ತದೆ.
* ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಪ್ರತಿಕ್ರಿಯಿಸಲು ಅಗತ್ಯವಿರುವಷ್ಟು ಆಂಬ್ಯುಲೆನ್ಸ್ ಗಳನ್ನು ವೈದ್ಯಕೀಯ, ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿರುತ್ತದೆ ಹಾಗೂ ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ, ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
* ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ.
* ಜನ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ವೇದಿಕೆಯ ಬಲಭಾಗದಲ್ಲಿ ಮತ್ತು ಮಾಧ್ಯಮದವರಿಗೆ ವೇದಿಕೆಯ ಎಡಭಾಗದಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.
* ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ಹಾಗೂ ವೆಬ್ ಕ್ಯಾಸ್ಟ್ ಮೂಲಕ ಪ್ರಸಾರ ಮಾಡಲು ಕ್ರಮ ವಹಿಸಲಾಗಿದೆ.
* ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮ ವಹಿಸಲಾಗಿದೆ.
* ಕಾರ್ಯಕ್ರಮಕ್ಕೆ ಆಗಮಿಸುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಹ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು.
* ಜನ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ವೇದಿಕೆಯ ಬಲಭಾಗದಲ್ಲಿ ಮತ್ತು ಮಾಧ್ಯಮದವರಿಗೆ ವೇದಿಕೆಯ ಎಡಭಾಗದಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.
* ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನದಲ್ಲಿ ಹಾಗೂ ವೆಬ್ ಕ್ಯಾಸ್ಟ್ ಮೂಲಕ ಪ್ರಸಾರ ಮಾಡಲು ಕ್ರಮ ವಹಿಸಲಾಗಿದೆ.
* ಆಹ್ವಾನಿತರು ಕಡ್ಡಾಯವಾಗಿ ಮುಖಗವಸು ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕ್ರಮ ವಹಿಸಲಾಗಿದೆ.
* ಕಾರ್ಯಕ್ರಮಕ್ಕೆ ಆಗಮಿಸುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಹ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು.