ತಾಪಂ, ಜಿಪಂ ಚುನಾವಣೆಗೆ ತಯಾರಿ: ಎಂ.ಸಿ.ವೇಣುಗೋಪಾಲ್ ಕರೆ

Bel_elections
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದಿನಿಂದಲೇ ಪಕ್ಷವನ್ನು ಬೂತ್‌ಮಟ್ಟದಲ್ಲಿ ಸಂಘಟಿಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾಯಕರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ.ಸಿ.ವೇಣುಗೋಪಾಲ್ ಹೇಳಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೆೇಟಿ, ನೀಡಿ ಮಾತನಾಡಿದರು. ಎಂ.ಸಿ.ವೇಣುಗೋಪಾಲ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಗೌರವಿಸಿದರು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ.ನಾಗೇಶ್ ಕುಮಾರ್ ಗೌಡ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಮಲಾಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ, ಉಪಾಧ್ಯಕ್ಷ ನವೀನ್ ಗೌಡ ಸವಣಾಲು, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ಅಬ್ದುಲ್ ಕರೀಮ್ ಗೇರುಕಟ್ಟೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಎಸ್‌ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮೊಹಮದ್ ಹನೀಫ್ ಉಜಿರೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net