

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. ೧೬ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಕಾರ್ಮಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮ೦ತ್ರಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕೆಸಿಡಿ ಮೈದಾನದಲ್ಲಿ ಸಿದ್ಧ್ದತಾ ಕಾರ್ಯಗಳು ಭರದಿಂದ ಸಾಗಿವೆ. ಈಗಾಗಲೇ ತ್ರಿಚಕ್ರ ವಾಹನಗಳನ್ನು ಮೈದಾನದಲ್ಲಿ ಇರಿಸಲಾಗಿದ್ದು, ವೇದಿಕೆ ಸಿದ್ಧಪಡಿಸಲಾಗುತ್ತಿದೆ.
ಇಲಾಖೆಯ ಉಪ ಕಾರ್ಮಿಕ ಆಯುಕ್ತ ನಾಗೇಶ ಡಿ.ಜಿ. ಹಾಗೂ ಸಹಾಯಕ ಕಾರ್ಮಿಕ ಆಯುಕ್ತೆ ಶ್ವೇತಾ ಎನ್., ಅಽಕಾರಿಗಳು, ಅಂಗವಿಕಲ ಕಲ್ಯಾಣಾಽಕಾರಿಗಳು ಬೀಡು ಬಿಟ್ಟಿದ್ದು ಕಾರ್ಯಕ್ರಮದ ಸಿದ್ಧತೆಯಲ್ಲಿದ್ದಾರೆ.
೧೬ರಂದು ಸಂಜೆ ೬ ಗಂಟೆಗೆ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನ ವಿತರಣೆ, ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟ್ಯಾಪ್ ವಿತರಣೆ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಚಾಲನೆ ನೀಡುವರು. ೧೨೬ ಕಂಪನಿಗಳು ಸಿಎಸ್‌ಆರ್ ಅನುದಾನದಡಿ ೫೨೫ ತ್ರಿಚಕ್ರ ವಾಹನ ಹಾಗೂ ಸಂತೋಷ್ ಲಾಡ್ ಫೌಂಡೇಶನ್‌ನಿAದ ೨೫ ವಾಹನಗಳನ್ನು ವಿತರಿಸಲಾಗುವುದು.
ಕಂಪನಿಗಳ ಸಿಎಸ್‌ಆರ್ ಅನುದಾನ ಪ್ರಾಯೋಜಕತ್ವದಡಿ ಕಾರ್ಮಿಕ ಇಲಾಖೆಯಿಂದ ವಿಶೇಷ ಚೇತನರಿಗೆ ಒಂದೇ ವೇದಿಕೆಯಲ್ಲಿ ೫೫೦ ತ್ರಿಚಕ್ರ ವಾಹನ ನೀಡುತ್ತಿರುವುದು ಇದೇ ಮೊದಲು.
ಪತ್ರಿಕಾ ವಿತರಕರಿಗೆ ವಿಮಾ ಯೋಜನೆ ಸೌಲಭ್ಯ:
ರಾಜ್ಯದ ಸುಮಾರು ೪೫,೦೦೦ ಅಸಂಘಟಿತ ವಲಯದ ದಿನಪತ್ರಿಕೆ ವಿತರಿಸುವ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಸಹಾಯ- ಸೌಲಭ್ಯಗಳ ಮಂಜೂರಾತಿ ಆದೇಶವನ್ನು ವಿತರಿಸಲಿದ್ದಾರೆ.