

ಹುಬ್ಬಳ್ಳಿ: ಸಾರ್ವಜನಿಕವಾಗಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಲ್ಲಿಯ ಈದ್ಗಾ ಮೈದಾನದಲ್ಲಿ ಸಿದ್ಧತೆಗಳು ಆರಂಭಗೊಂಡಿವೆ. ವಿಶಾಲವಾದ ಮೈದಾನದಲ್ಲಿ ನಿಲ್ಲಿಸಲಾಗುತ್ತಿದ್ದ ಖಾಸಗಿ ವಾಹನಗಳನ್ನು ತೆರವುಗೊಳಿಸಲಾಗಿದೆ. ಶುಕ್ರವಾರ ಸಂಜೆಯೇ ಮೈದಾನವನ್ನು ಖಾಲಿ ಮಾಡಿಸಲಾಗಿತ್ತು. ಹು-ಧಾ ಮಹಾನಗರ ಪಾಲಿಕೆಯ ಪೌರ ಕಾರ್ವಿುಕರು ಶನಿವಾರ ಕಸಗೂಡಿಸಿ, ಮೈದಾನದ ಸ್ವಚ್ಛತೆ ಕಾರ್ಯ ಕೈಗೊಂಡರು.
ಇಲ್ಲಿ ಸೆ. 19ರಿಂದ 21ರವರೆಗೆ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿ ಗಣೇಶನನ್ನು ಪ್ರತಿಷ್ಠಾಪಿಸಲಿದೆ. ಈ ಸಂಬಂಧ ಪಾಲಿಕೆ ಆಯುಕ್ತರು ಶುಕ್ರವಾರ ರಾತ್ರಿ ಅನುಮತಿ ನೀಡುತ್ತಿದ್ದಂತೆ ಮೈದಾನದಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.