ರಾಮನ ಪ್ರಸಾದ ತಯಾರಿ

Preparation of Ram's prasadam
Published on

ಕುಶಾಲನಗರ:

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ದಿನ ಕುಶಾಲನಗರದಲ್ಲಿ ಲಾಡು ವಿತರಣೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀ ರಾಮ ಸೇವಾ ಸಮಿತಿ, ಕುಶಾಲನಗರ ಸಮಸ್ತ ದೇವಾಲಯಗಳ ಒಕ್ಕೂಟ ಹಾಗೂ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ಲಾಡು ತಯಾರಿಸಿ ಪೊಟ್ಟಣಕ್ಕೆ ತುಂಬುವ ಕೆಲಸ ಭರದಿಂದ ನಡೆಯುತ್ತಿದೆ. ಇಲ್ಲಿನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ೨೫ ಬಾಣಸಿಗರು ಲಾಡು ತಯಾರಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ೪೦ ಸಾವಿರ ಲಾಡುಗಳನ್ನು ತಯಾರಿಸಲಾಗುತ್ತಿದ್ದು ೫೦೦ ಸ್ವಯಂ ಸೇವಕರು ಲಾಡುಗಳನ್ನು ಪೊಟ್ಟಣಕ್ಕೆ ತುಂಬಿಸುವುದರಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಭಜನಾ ಮಂಡಳಿ ಸದಸ್ಯರು, ವಿವಿಧ ಸಂಘಟನೆಗಳ ಮಹಿಳೆಯರು, ಪುರುಷರು ಸೇರಿದಂತೆ ಸ್ಥಳೀಯರು ಸ್ವಯಂ ಸೇವಕರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಗಣಪತಿ ದೇವಾಲಯ ಸಮಿತಿ ಗೌರವ ಅಧ್ಯಕ್ಷ ಎಂ.ಕೆ. ದಿನೇಶ್ ಮತ್ತು ಪುರಸಭೆ ಸದಸ್ಯ ಅಮೃತ್ ರಾಜ್ ನೇತೃತ್ವದಲ್ಲಿ ಈ ಕಾರ್ಯ ನಡೆಯುತ್ತಿದ್ದು, ಮನೆ ಮನೆಗೂ ಲಾಡು ಪ್ರಸಾದವನ್ನು ತಲುಪಿಸುವ ಗುರಿ ಹೊಂದಿರುವ ಬಗ್ಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net