ವಿವಿಧ ಜಯಂತಿಗಳ ಪೂರ್ವಭಾವಿ ಸಭೆ ಜಯಂತಿಗಳ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ-ಎಡಿಸಿ

ADC MEETING
ADC MEETING
Published on

ರಾಯಚೂರು ಜಿಲ್ಲಾಡಳಿತದ ವತಿಯಿಂದ ಶ್ರೀರೇಣುಕಾಚಾರ್ಯ, ಶ್ರೀಯೋಗಿನಾರಾಯಣ ಯತೀಂದ್ರರ (ಕೈವಾರ ತಾತಯ್ಯ) ಹಾಗೂ ಶ್ರೀಅಗ್ನಿಬನ್ನಿರಾಯ ಜಯಂತಿಗಳ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಽಕಾರಿಗಳಾದ ಶಿವಾನಂದ ಅವರು ಹೇಳಿದರು.

ನಗರದ ಜಿಲ್ಲಾಽಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವರ್ಷವೂ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿAದ ವಿವಿಧ ಜಯಂತಿಗಳನ್ನು ಆಚರಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು. ಮಾ.೧೨ರಂದು ನಡೆಯಲಿರುವ ಶ್ರೀರೇಣುಕಾಚಾರ್ಯ ಜಯಂತಿ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ ೯ಗಂಟೆಗೆ ನಗರದ ಸೋಮವಾರಪೇಟೆಯ ಮಠದಿಂದ ಮೆರವಣಿಗೆ ಹಾಗೂ ಬೆಳಿಗ್ಗೆ ೧೧ಗಂಟೆಗೆ ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಶಿಸ್ತುಬದ್ದವಾಗಿ ನಡೆಯಬೇಕು ಎಂದು ತಿಳಿಸಿದರು.

ಮಾ.೧೪ರಂದು ನಡೆಯಲಿರುವ ಯೋಗಿನಾರಾಯಣ ಯತೀಂದ್ರರ (ಕೈವಾರ ತಾತಯ್ಯ) ಹಾಗೂ ಮಾ.೨೮ರಂದು ಅಗ್ನಿಬನ್ನಿರಾಯ ಜಯಂತಿಗಳನ್ನು ನಿಗದಿತ ದಿನಗಳಲ್ಲಿ ಅಂದು ಬೆಳಿಗ್ಗೆ ೧೧ಗಂಟೆಗೆ ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ವೇದಿಕೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚನೆ ನೀಡಿದರು.

ಈ ಜಯಂತಿ ಕಾರ್ಯಕ್ರಮಗಳಲ್ಲಿ ಅಽಕಾರಿಗಳು ಹಾಗೂ ಸಿಬ್ಬಂದಿ ತಪ್ಪದೇ ಹಾಜರಿರಬೇಕು. ಸಮಾಜದ ಮುಖಂಡರು ಮತ್ತು ಶಾಲಾ ಕಾಲೇಜಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ರಂಗಮAದಿರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡಲು ಮಹಾನಗರ ಪಾಲಿಕೆಯ ಅಽಕಾರಿಗಳು ಮತ್ತು ಸಿಬ್ಬಂದಿ ಅಗತ್ಯ ಕ್ರಮವಹಿಸಬೇಕು. ಶಿಷ್ಟಾಚಾರ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ತಲುಪಿಸಬೇಕು. ಜಯಂತಿಗಳ ಮೆರವಣಿಗೆ ವೇಳೆ ವಿವಿಧ ಕಲಾ ತಂಡಗಳು ಭಾಗಿಯಾಗಲು ಕ್ರಮವಹಿಸಬೇಕೆಂದು ಸಂಬAಽಸಿದ ಅಽಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು, ರಾಯಚೂರು ನಗರಸಭೆಯ ಸಮುದಾಯ ಸಂಘಟನಾ ಅಽಕಾರಿ ಕೃಷ್ಣಾ ಕಟ್ಟಿಮನಿ,ಶ್ರೀ ಕಿಲ್ಲೇ ಮಠದ ಶ್ರೀ ಶಾಂತಮಲ್ಲ ಶಿವಾಚಾರ್ಯರ,ಅಭಿನವ ರಾಚೋಟಿ ವೀರ ಶಿವಾಚಾರ್ಯ ಸೇರಿದಂತೆ ವಿವಿಧ ಸ್ವಾಮೀಜಿಗಳು ಹಾಗೂ ವಿವಿಧ ಇಲಾಖೆಯ ಅಽಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net