

ದಾವಣಗೆರೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಲಿರುವ ಪತ್ರಕರ್ತರ 38ನೇ ರಾಜ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಗೆ ಸಿದ್ಧತಾ ಸಭೆ ನಡೆಯಲಿದೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಮ್ಮೇಳನದ ವೆಬ್ಸೈಟ್‌ಗೆ ಚಾಲನೆ ನೀಡುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಅಗಮಿಸುವರು. ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡುವರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ.ಒಡೆಯರ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಣ್ಣ ಪಾಲ್ಗೊಳ್ಳುವರು.