ಒಳ್ಳೆಯ ಫಲಿತಾಂಶಕ್ಕೆ ಸಿದ್ಧತೆ ಕೈಗೊಳ್ಳಿ

HYR shikshana 16
Published on

ಹಿರಿಯೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗುಣಾತ್ಮಕ ಅಂಕಗಳನ್ನು ಪಡೆಯಲು ಸಹಾಯಕವಾಗುವಂತೆ ಕ್ರಿಯಾಯೋಜನೆ ತಯಾರಿಸಿ ಅದರಂತೆ ಪಠ್ಯ ಬೋಧನೆಯಲ್ಲಿ ತೊಡಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಸೂಚಿಸಿದರು.

ನಗರದ ವಾಗ್ದೇವಿ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

ಕಳೆದ ವರ್ಷ ಉತ್ತಮ ಫಲಿತಾಂಶ ಬಂದಿದ್ದು, ಈ ಗುಣಮಟ್ಟ ಕಾಯ್ದುಕೊಳ್ಳಲು ಶ್ರಮ ಅಗತ್ಯ. ಆದ್ದರಿಂದ ಸೃಜನಾತ್ಮಕ ಮತ್ತು ಕ್ರಿಯಾಶೀಲವಾಗಿ ಪಠ್ಯ ಬೋಧನೆಯಲ್ಲಿ ತೊಡಗಬೇಕು ಎಂದು ಹೇಳಿದರು.

ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆ ಪಿಲಾಜನಹಳ್ಳಿ ಹಾಗೂ ವಸಂತನಗರ ಶಾಲೆಗಳಲ್ಲಿ ಕಳ್ಳತನವಾಗಿದ್ದು, ಮುಖ್ಯಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳ ಮುಖ್ಯಶಿಕ್ಷಕರಾದ ಆರ್.ಟಿ.ಎಸ್.ಶ್ರೀನಿವಾಸ, ಗಿರೀಶ, ಸುಮಿತ್ರಾ ಮಾತನಾಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಬಿ.ತಿಪ್ಪೇರುದ್ರಪ್ಪ, ನಾಗನಾಯ್ಕ, ತಿಪ್ಪೇರುದ್ರಪ್ಪ, ಮಂಜುನಾಥ್, ವಿ.ಭಾಗ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net