ನೀಟ್ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ : ಅಧಿಕಾರಿಗಳಿಗೆ ಮೈಸೂರು ಡಿಸಿ ಸೂಚನೆ

Lakshmikanth-reddy-1-
Published on

ಮೈಸೂರು: ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಮೇ 4 ರಂದು ನೀಟ್ (ಯುಜಿ) ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪ ಆಗದಂತೆ ಸುಗಮವಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ನೀಟ್ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ 7,709 ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆ ಸೂಸತ್ರವಾಗಿ ನಡೆಯಲು ಬೇಕಾದ ಎಲ್ಲ ಸಿದ್ಧತೆಗಳಣ್ನು ಕೈಗೊಳ್ಳಬೇಕು ಎಂದರು.

ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವವರಿಗೆ ನೀಟ್ ಪರೀಕ್ಷೆ ನಡೆಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪರೀಕ್ಷೆ ನಡೆಸುತ್ತಿದ್ದು, ಅವರು ನೀಡುವ ಮಾರ್ಗಸೂಚಿ ಪ್ರಕಾರ ನೇಮಕವಾಗಿರುವ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net