ಫಲಾನುಭವಿಗಳ ಸಮ್ಮೇಳನಕ್ಕೆ ಸಿದ್ಧತೆ ಕೈಗೊಳ್ಳಿ

kolar
Published on

ಕೋಲಾರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡಿರುವ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾರ್ಚ್​ ವೇಳೆಗೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ

ಡಾ. ಪ್ರವಿಣ್​. ಪಿ ಬಾಗೇವಾಡಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಸಿಎಂ ಕಾರ್ಯಕ್ರಮ ಉದ್ಘಾಟಿಸಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸುವರು. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಮ್ಮೇಳನ ನಡೆಯುವ ಸ್ಥಳದಲ್ಲಿ ಕುಡಿಯುವ ನೀರು, ಶೌಚಗೃಹ ಸೇರಿ ಮೂಲ ಸೌಕರ್ಯ ಒದಗಿಸಲು ಹಾಗೂ ಸೂಕ್ತ ಪೊಲೀಸ್​ ಬಂದೋಬಸ್ತ್​ ಮಾಡಿಕೊಳ್ಳಲು ಸೂಚಿಸಿದರು.

ಸರ್ಕಾರದ ವಿವಿಧ 35 ಯೋಜನೆಗಳಡಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಪಟ್ಟಿ ತಯಾರಿಸಿ ಸಮಾವೇಶಕ್ಕೆ ಫಲಾನುಭವಿಗಳಿಗೆ ಕರೆ ತರುವ ವ್ಯವಸ್ಥೆ ಇಲಾಖೆವಾರು ಅಧಿಕಾರಿಗಳು

ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್​ ಮಾತನಾಡಿ, ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಕರೆತಂದು ಆಯೋಜಿಸಲಾಗುವುದು. ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಫಲಾನುಭವಿಗಳಿಗೆ ನೀಡಲಾಗುವುದು. ಪ್ರತಿ ಇಲಾಖೆಯವರು ಫಲಾನುಭವಿಗಳನ್ನು ಕರೆತರಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಗ್ರಾಮ ಪಂಚಾಯಿತಿಯ ಫಲಾನುಭವಿಗಳನ್ನು ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಶಿಷ್ಟಾಚಾರ ಅನ್ವಯ ಶಾಸಕರು, ವಿಧಾನ ಪರಿಷತ್​ ಸದಸ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಡಾ. ಮೈತ್ರಿ ಸೇರಿದಂತೆ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net