

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧ ಆವರಣದಲ್ಲಿ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಎಂಬ ೂಷ ವಾಕ್ಯದೊಂದಿಗೆ ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿಯೂ ಸಹ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅಗತ್ಯ ಸಿದ್ಧತೆಗೆ ಸೂಚನೆ: ಯೋಗ ದಿನ ಕಾರ್ಯಕ್ರಮ ಕುರಿತು ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರಿಗೆ ತಲುಪಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂನೆಯಾಗದಂತೆ ನಿಗಾವಹಿಸಬೇಕು. ಯೋಗ ದಿನಾಚರಣೆ ಕುರಿತು ಜಿಲ್ಲೆಯಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಚಿಕಿತ್ಸಾ ಟಕ ವ್ಯವಸ್ಥೆ ಮಾಡಿಕೊಳ್ಳಬೇಕು. ಉಪಹಾರ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆಗೆ ವ್ಯವಸ್ಥೆ, ವಿದ್ಯುತ್ ಇನ್ನಿತರ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಕ್ರಮ ವಹಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಾಗೃತಿ ಜಾಥಾ: ಯೋಗ ದಿನದ ಅಂಗವಾಗಿ ಜೂ.20ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ 8.30 ಗಂಟೆಗೆ ಯೋಗ ದಿನಾಚರಣೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಾಥಾದಲ್ಲಿ ಶಾಲಾ&ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ, ಕನ್ನಡ ಮತ್ತು ಸಂಸತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರಿದ್ದರು.