ಜನತಾ ದರ್ಶನ ಕಾರ್ಯಕ್ರಮ ಸಿದ್ಧತೆ ಮಾಡಿಕೊಳ್ಳಿ

21-09-Shiva-4
ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಅಧ್ಯಕ್ಷತೆಯಲ್ಲಿ ಗುರುವಾರ ಜನತಾ ದರ್ಶನ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆ ಜರುಗಿತು. ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಸೆ.25ರಂದು ಜರುಗಲಿರುವ ಜನತಾ ದರ್ಶನ ಕಾರ್ಯಕ್ರಮವನ್ನು ಯಾವುದೇ ಲೋಪದೋಷಗಳಿಲ್ಲದಂತೆ ಅಚ್ಚುಕಟ್ಟಾಗಿ ನಡೆಯುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಅಕಾರಿಗಳಿಗೆ ಸೂಚಿಸಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜನತಾ ದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟ್ಲೀ ನೇತೃತ್ವದಲ್ಲಿ ಜನರಿಂದ ಕುಂದು ಕೊರತೆ, ಅಹವಾಲುಗಳ ಅರ್ಜಿ ಸ್ವೀಕರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಇಲಾಖಾವಾರು ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದ್ದು, ಇಲಾಖೆ ಅಕಾರಿಗಳು ತಮ್ಮ ಇಲಾಖೆಗೆ ಸಂಬಂಸಿದಂತೆ ಸಾರ್ವಜನಿಕರು ಸಲ್ಲಿಸುವ ದೂರುಗಳು ಮತ್ತುಅಹವಾಲುಗಳನ್ನು ಸರಿಯಾಗಿ ನೋಂದಾಯಿಸಿಕೊಂಡು ಸಾಧ್ಯವಾದಲ್ಲಿ ಸ್ಥಳದಲ್ಲಿಯೇ ವಿಲೇವಾರಿ ಮಾಡಬೇಕು. ಇಲ್ಲವಾದರಲ್ಲಿ ವಾರದೊಳಗೆ ವಿಲೇವಾರಿಗೆ ಕ್ರಮಕೈಗೊಳ್ಳಬೇಕು.
ದೂರು ನೋಂದಾಯಿಸಿಕೊಳ್ಳಲು ಲ್ಯಾಪ್‌ಟಾಪ್ ವ್ಯವಸ್ಥೆ ಮಾಡಬೇಕು. ನೋಂದಣಿ ಪ್ರಕ್ರಿಯೆ ಸರಿಯಾದ ರೀತಿಯಲ್ಲಿ ನಡೆಯಬೇಕು. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸ್ಥಳದಲ್ಲಿ ಜನರಿಗೆ ಕುಡಿಯುವ ನೀರು, ಶೌಚಾಲಯ ಮುಂದಾತ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಸೇರಿದಂತೆ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net